Saturday, February 8, 2025

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಕೋರು ಕಮಿಟಿ ಸಭೆ : ನೂತನ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಅವರಿಗೆ ಅಧಿಕಾರ ಹಸ್ತಾಂತರ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಕೋರು ಕಮಿಟಿ ಸಭೆ ಮಾ.21ರಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಉಪಸ್ಥಿತಿಯಲ್ಲಿ ಹಾಗೂ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಒಡ್ಡೂರು ಫಾರ್ಮ್ ಹೌಸ್ ನಲ್ಲಿ ಜರಗಿತು.

ಕ್ಷೇತ್ರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಚೆನ್ನಪ್ಪ ಕೋಟ್ಯಾನ್ ರವರಿಗೆ ದೇವಪ್ಪ ಪೂಜಾರಿಯವರು ಪಕ್ಷದ ಸಾಲು ಹಾಕಿ ಜವಾಬ್ದಾರಿಯನ್ನು ಹಸ್ತಾಂತರ ಮಾಡಿದರು.

ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪೈ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ ಪದ್ಮನಾಭ ಕೊಟ್ಟಾರಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ರವೀಶ್ ಶೆಟ್ಟಿ ಪ್ರಮುಖರಾದ ದೇವದಾಸ್ ಶೆಟ್ಟಿ ರಾಮದಾಸ್ ಬಂಟ್ವಾಳ ಜಗದೀಶ್ ಶೆಣವ ಉಪಸ್ಥಿತರಿದ್ದರು.

ಉಳಿದ ಪದಾಧಿಕಾರಿಗಳ ಆಯ್ಕೆ ಲೋಕಸಭಾ ಚುನಾವಣೆಯ ಬಳಿಕ ಮಾಡಲಾಗುವ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಜೊತೆಯಾಗಿ ಕೆಲಸ ಮಾಡಿ ಅತ್ಯಧಿಕ ಅಂತರಗಳ ಗೆಲುವು ಸಾಧಿಸಲು ಪ್ರಯತ್ನ ಮಾಡುವ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ.

More from the blog

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...

ಬಂಟ್ವಾಳ : ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬಂಟ್ವಾಳ: ಪ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ  ನಡೆದಿದೆ. ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟ ವ್ಯಕ್ತಿ. ರಾಜೇಶ್  ಸಜೀಪ...

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...