ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಒಂದೇ ಪ್ರದೇಶದಲ್ಲಿ ಮೂರು ಕೋವಿಡ್ -19 ಪಾಸಿಟಿವ್ ಪ್ರಕರಣ ಪತ್ತೆಯಾದ ಬಳಿಕ ಪ್ರಕರಣದ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದ ವ್ಯಕ್ತಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಕೊರೊನಾ ಪಾಸಿಟಿವ್ ಪ್ರಕರಣದ ವ್ಯಕ್ತಿಗಳ ಸೆಕೆಂಡರಿ ಸಂಪರ್ಕದ ಮಾದರಿ ಸಂಗ್ರಹಿಸಲಾಗಿದೆ. ಬಳಿಕ ಅವರನ್ನು ಗುರುತಿಸಿ ಅವರು ಇದ್ದ ಕಡೆಗೆ ಭೇಟಿ ನೀಡಿ ಅವರ ಮಾದರಿ ಸಂಗ್ರಹಣಾ ಕಾರ್ಯ ಆರೋಗ್ಯ ಇಲಾಖೆಯ ವಿಶೇಷ ತಂಡದಿಂದ ನಡೆಯುತ್ತಿದೆ.
ದ್ವಿತೀಯ ಸಂಪರ್ಕದ ವ್ಯಕ್ತಿಗಳು ಬಂಟ್ವಾಳ, ಬೆಳ್ತಂಗಡಿ ಹಾಗೂ ಮಂಗಳೂರಿನಲ್ಲಿ ಇರುವುದರ ಬಗ್ಗೆ ಮಾಹಿತಿ ಪಡೆದ ಇಲಾಖೆ ಅವರ ಮಾದರಿ ಸಂಗ್ರಹಣಾ ಕಾರ್ಯ ಮಾಡಿದೆ.

