ಬಿ.ಸಿ.ರೋಡು ತಾಲೂಕು ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜೀತ ಪದ್ಧತಿ ನಿರ್ಮೂಲನ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು ಜೀತ ಪದ್ಧತಿಯ ಬಗ್ಗೆ ಸದಾ ಜಾಗೃತರಾಗಿದ್ದು ಸಾರ್ವಜನಿಕರಲ್ಲಿ ಅಧಿಕಾರಿಗಳು ಇದರ ಕುರಿತು ಅರಿವು ಮೂಡಿಸಬೇಕಿದೆ. ಜೀತ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ತಹಶೀಲ್ದಾರ್ ಅರ್ಚನಾ ಭಟ್ ಹೇಳಿದರು

ಜೀತ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು, ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕರಾದ ಆರ್ .ವಿಜಯ್, ಜನಾರ್ದನ್.ಜೆ ತಾಲೂಕು ಕಚೇರಿ ಸಿಬ್ಬಂದಿ ವರ್ಗ ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು