Wednesday, July 9, 2025

13ನೇ ವರ್ಷದ ಮೂಡೂರು -ಪಡೂರು ಬಂಟ್ವಾಳ ಕಂಬಳಕ್ಕೆ ಚಾಲನೆ

ಬಂಟ್ವಾಳ: ಬಂಟ್ವಾಳ ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿಯ ವತಿಯಿಂದ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ನಡೆದ ೧೩ನೇ ವರ್ಷದ ಮೂಡೂರು -ಪಡೂರು ಬಂಟ್ವಾಳ ಕಂಬಳವನ್ನು ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟಿಸಿ, ಹೊಸ ಆವಿಷ್ಕಾರದ ಕಾವಳಕಟ್ಟೆ ಕಂಬಳ ವೈಭವವನ್ನು ನಾವೂರು ಕಂಬಳದ ಮೂಲಕ ಮತ್ತೆ ಕಾಣುವಂತಾಗಿದೆ. ಈ ಭಾಗದ ರೈತಾಪಿ ವರ್ಗದ ಸಹಕಾರದಿಂದ ಸಾಧ್ಯವಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಭಹಾರೈಸಿದರು. ಅಲ್ಲಿಪಾದೆ ಸಂತ ಅಂತೋನಿ ಚರ್ಚ್ನ ಧರ್ಮಗುರು ರೆ| ಫಾ| ಫೆಡ್ರಿಕ್ ಮೊಂತೆರೊ ಅವರು ದೀಪ ಬೆಳಗಿಸಿದರು.

ಮಾಜಿ ಮೇಯರ್ ಎಂ.ಶಶಿಧರ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ನಮ್ಮ ಕುಡ್ಲ ಮುಖ್ಯಸ್ಥ ಲೀಲಾಕ್ಷ ಕರ್ಕೇರ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಂಬಳ ಕೋಣಗಳ ಯಜಮಾನರಾದ ಉಮೇಶ್ ಶೆಟ್ಟಿ ಮಾಣಿಸಾಗು, ಲಿಯೋ ಫೆರ್ನಾಂಡೀಸ್ ಸರಪಾಡಿ, ಉದ್ಯಮಿಗಳಾದ ರಘುನಾಥ ಸೋಮಯಾಜಿ, ಪುರುಷೋತ್ತಮ ಶೆಟ್ಟಿ, ಐತಪ್ಪ ಆಳ್ವ, ಎಂಆರ್‌ಜಿ ಗ್ರೂಪ್ ನ ಬಾಲಕೃಷ್ಣ ಶೆಟ್ಟಿ, ತಾ.ಪಂ.ಮಾಜಿ ಸದಸ್ಯ ಪ್ರವೀಣ್ ಆಳ್ವ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಆಲಿ, ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ನಾರಾಯಣ ನಾಯ್ಕ್, ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜ ಪುತ್ತೂರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಯಪ್ರಕಾಶ್ ರೈ, ಕಂಬಳ ಸಮಿತಿಯ ಸಂಚಾಲಕ ಬಿ.ಪದ್ಮಶೇಖರ್ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಪಿಲಿಫ್ ಫ್ರಾಂಕ್, ಉಪಾಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಅವಿಲ್ ಮಿನೇಜಸ್, ಬೇಬಿ ಕುಂದರ್, ಸುದೀಪ್‌ಕುಮಾರ್ ಶೆಟ್ಟಿ, ಎಂ.ಎಸ್.ಮಹಮ್ಮದ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.

More from the blog

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...