Wednesday, February 12, 2025

ಲಾರಿ ಬಸ್ ಡಿಕ್ಕಿ, ನಾಲ್ವರಿಗೆ ಗಾಯ: ಮನೆಗೆ ನುಗ್ಗಿದ ಬಸ್ ಅಪಾಯದಿಂದ ಪಾರು

ಬಂಟ್ವಾಳ: ಕೆಎಸ್.ಆರ್ ಟಿ.ಸಿ ಬಸ್ ಹಾಗೂ ಟ್ಯಾಂಕರ್ ಲಾರಿಗಳೆರಡು ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ಬಂಟ್ವಾಳ – ವಿಲ್ಲಾಂಪುರ ರಾಷ್ಟ್ರೀಯ ಹೆದ್ದಾರಿಯ ಪರ್ಲ ಎಂಬಲ್ಲಿ ನಡೆದಿದೆ.

ಬಂಟ್ವಾಳ ಸಮೀಪದ ಪರ್ಲ ಎಂಬಲ್ಲಿ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಅಲ್ಪಸ್ವಲ್ಪ ಪ್ರಮಾಣದ ಗಾಯಗಳೊಂದಿಗೆ ಪಾರಾಗಿದ್ದಾರೆ.

ಪರ್ಲ ನಿವಾಸಿ ಭುಜಂಗ ಮೂಲ್ಯ ಎಂಬವರ ಮನೆಗೆ ಬಸ್ ನುಗ್ಗಿದ ಪರಿಣಾಮ ಮನೆಗೆ ಸ್ವಲ್ಪ ಹಾನಿಯಾಗಿದೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎ‌.ಎಸ್.ಐ.ವಿಜಯ್ ಸಿಬ್ಬಂದಿಗಳಾದ ರಮೇಶ್, ರಾಜುಪೂಜಾರಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾದಾಗ ಇವರ ಮನೆಯ ಪರಿಹಾರ ಹಣ ಇನ್ನೂ ಬಾರದೆ ಆ ಮನೆಯವರು ಪ್ರಾಣಭಯದಲ್ಲಿ ಜೀವನ ಕಳೆಯುವಂತಾಗಿದೆ

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...