Wednesday, February 12, 2025

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತ ದಿ. ಮನೋಹರ ಪ್ರಸಾದ್ ಗೆ ನುಡಿನಮನ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶುಕ್ರವಾರ ನಿಧನ ಹೊಂದಿದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ನುಡಿನಮನ ಸಲ್ಲಿಸಲಾಯಿತು.

ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಮೌನ ಪ್ರಾರ್ಥನೆ ಮಾಡಿ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು. ಈ ಸಂದರ್ಭ ಹಿರಿಯ ಪತ್ರಕರ್ತರಾದ ಗಣೇಶ ಪ್ರಸಾದ ಪಾಂಡೇಲು, ವೆಂಕಟೇಶ ಬಂಟ್ವಾಳ, ಹರೀಶ ಮಾಂಬಾಡಿ, ರತ್ನದೇವ್ ಪುಂಜಾಲಕಟ್ಟೆ. ಕಾರ್ಯದರ್ಶಿ ಮೌನೇಶ ವಿಶ್ವಕರ್ಮ ನುಡಿನಮನ ಸಲ್ಲಿಸಿದರು. ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಉಪಾಧ್ಯಕ್ಷ ಯಾದವ ಅಗ್ರಬೈಲ್, ಪತ್ರಕರ್ತರಾದ ಕಿರಣ್ ಸರಪಾಡಿ, ಕಿಶೋರ್ ಪೆರಾಜೆ, ಚಂದ್ರಶೇಖರ ಕಲ್ಮಲೆ ಉಪಸ್ಥಿತರಿದ್ದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...