Thursday, June 26, 2025

ಬಂಟ್ವಾಳ: ತಾಲೂಕು ಅಡಳಿತದ ವತಿಯಿಂದ ಮಾಸ್ಕ್ ಡೇ ಆಚರಣೆ

ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತ ಸೇರಿದಂತೆ ಇತರ ಎಲ್ಲಾ ಇಲಾಖೆಗಳ ಸಹಯೋಗದಲ್ಲಿ ಕೋವಿಡ್-19 ಮುನ್ನೆಚ್ಚರಿಕೆಯ ದೃಷ್ಟಿಯಿಂದ ಸರಕಾರದ ಆದೇಶದಂತೆ ಗುರುವಾರ ಮಾಸ್ಕ್ ಡೇಯನ್ನು ಆಚರಿಸಲಾಯಿತು.


ಈ ಹಿನ್ನೆಲೆಯಲ್ಲಿ ಬಿ.ಸಿ.ರೋಡು ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಜಾಥಾ ನಡೆಯಿತು.

ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಜಾಥಾಕ್ಕೆ ಚಾಲನೆ ನೀಡಿ, ಎಲ್ಲರೂ ಜತೆ ಸೇರಿ ಸರಕಾರದ ನಿರ್ದೇಶನಗಳಂತೆ ಕೋವಿಡ್-19 ವಿರುದ್ಧ ಹೋರಾಡೋಣ ಎಂದು ಕರೆ ನೀಡಿದರು.

ಮಾಸ್ಕ್ ಡೇ ಜಾಥಾದಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ತಹಶೀಲ್ದಾರ್ ರಶ್ಮಿ ಎಸ್.ಆರ್., ತಾ.ಪಂ.ಇ.ಓ. ರಾಜಣ್ಣ, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು, ಉಪತಹಶೀಲ್ದಾರ್‌ಗಳಾದ ರಾಜೇಶ್ ನಾಯ್ಕ್, ಶ್ರೀಧರ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್‌ಕುಮಾರ್ ಬೆಂಜನಪದವು, ದಿವಾಕರ್ ಮುಗುಳಿಯ, ಕಂದಾಯ ಇಲಾಖೆ ವಿಷಯ ನಿರ್ವಾಹಕ ವಿಷುಕುಮಾರ್, ಪ್ರಮುಖರಾದ ರಾಮಾನಾಥ ರಾಯಿ, ವೆಂಕಪ್ಪ ಪೂಜಾರಿ, ಪ್ರಣಾಮ್‌ಕುಮಾರ್, ಡೆಪ್ಯುಟಿ ತಹಶಿಲ್ದಾರ್ ರಾಧಾಕೃಷ್ಣ, ಬಿ.ಒ.ಜ್ಞಾನೇಶ್, ವಿಟ್ಲ ಸಿ.ಡಿ.ಪಿ.ಒ.ಸುಧಾಜೋಶಿ ಮೊದಲಾದವರಿದ್ದರು. ಜಾಥಾದ ವೇಳೆ ಮಾಸ್ಕ್ ಇಲ್ಲದೆ ಇರುವ ನಾಗರಿಕರಿಗೆ ಮಾಸ್ಕ್ ವಿತರಿಸಲಾಯಿತು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...