Wednesday, February 12, 2025

ಸ್ನೇಹಿತರ ಜೊತೆ ಸ್ನಾನಕ್ಕೆ ಬಂದಿದ್ದ ಐವರಲ್ಲಿ ಓರ್ವ ನೇತ್ರಾವದಿ ನದಿಯಲ್ಲಿ ಬಿದ್ದು ಸಾವು

ಬಂಟ್ವಾಳ: ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ ಮೃತಪಟ್ಟ ವ್ಯಕ್ತಿ.
ಬೆಳ್ತಂಗಡಿ ನಿವಾಸಿಗಳಾದ ವಿನ್ಸಿ,ಮ್ಯಾಕ್ಸಿ,ಪ್ರಮೋದ್, ದಯಾನಂದ ಎಂಬವರ ಜೊತೆಗೆ ನೇತ್ರಾವತಿ ನದಿಗೆ ಈಜಾಡಲು ಬಂದಿದ್ಧ ವೇಳೆ ಘಟನೆ ನಡೆದಿದೆ.
ವಿನ್ಸಿ ಎಂಬವರ ಪತ್ನಿಯ ಮನೆ ಶಂಭೂರಿನಲ್ಲಿದ್ದು, ಇಲ್ಲಿಗೆ ಅವಾಗ ಅವಾಗ ಬಂದು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿ ಹೋಗುತ್ತಿದ್ದರು ಎಂದು ಹೇಳಲಾಗಿದೆ.
ಇಂದು ಕೂಡ ಅದೇ ರೀತಿ ಸ್ನೇಹಿತರು ಬೆಳ್ತಂಗಡಿಯಿಂದ ಕಾರಿನಲ್ಲಿ ಬಂದಿದ್ದು, ನದಿಗೆ ಸ್ನಾನ ಮಾಡಲು ಬಂದಿದ್ದರು.
ಸಂಜೆ ಸುಮಾರು 4 ಗಂಟೆ ವೇಳೆಗೆ ನದಿಯಿಂದ ಲೋಹಿತಾಕ್ಷ ಅವರು ಕಾರಿನ ಬಳಿಗೆ ಹೋಗುವುದಾಗಿ ಬಂದಿದ್ದರು. ಆದರೆ ಸ್ನೇಹಿತರು ಸ್ನಾನ‌ ಮುಗಿಸಿ ಕಾರಿನತ್ತ ಬಂದಾಗ ಈತ ಕಾರಿನ ಬಳಿ ಇಲ್ಲದಿರುವುದನ್ನು ಕಂಡು ಗಾಬರಿಯಾಗಿ ಮತ್ತೆ ನದಿಯತ್ತ ತೆರಳಿದಾಗ ನದಿಯ ಬದಿ ನೀರಿನಲ್ಲಿ ಬಿದ್ದಿದ್ದ.
ಬಿದ್ದ ವೇಳೆ ತಲೆಯ ಭಾಗಕ್ಕೆ ಗಾಯವಾಗಿದ್ದು, ಈತನನ್ನು ಮೇಲೆ ತರಲಾಗಿದೆಯಾದರೂ ಅ ವೇಳೆ ಆತ ಮೃತಪಟ್ಟ ಬಗ್ಗೆ ಸ್ನೇಹಿತರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಅಲ್ಲೇ ಸಮೀಪದಲ್ಲಿ ವಾಲಿಬಾಲ್ ಅಟ ಆಡುತ್ತಿದ್ದ ಸ್ಥಳೀಯರು ಗಮನಿಸಿ ವಿಚಾರಿಸಿದಾಗ ಬೆಳಕಿಗೆ ಬಂದಿದೆ.
ಬೆಳ್ತಂಗಡಿಯಿಂದ ಬಂಟ್ವಾಳಕ್ಕೆ ಸ್ನಾನ ಮಾಡಲು ಬಂದಿರುವ ಯುವಕರ ಬಗ ಸಾಕಷ್ಟು ಸಂಶಯಗಳು ಸ್ಥಳೀಯರಲ್ಲಿ ಮೂಡಿತ್ತು.
ಆದರೆ ಅಂತಹ ಯಾವುದೇ ಸಂದೇಹಗಳಿಲ್ಲ, ಸ್ನೇಹಿತರು ಜೊತೆಯಾಗಿ ಇಲ್ಲಿಗೆ ಈಜಲು ಬರುತ್ತಿದ್ದ ಬಗ್ಗೆ ಪೋಲೀಸರಿಗೆ ಮಾಹಿತಿ ದೊರೆತಿದ್ದು, ಈತ ಬಿದ್ದು ತಲೆಗೆ ಗಾಯವಾಗಿದ್ದ ಕಾರಣ ಮೃತಪಟ್ಟಿರಬಹುದು ಎಂದು ಪೋಲೀಸರು ತಿಳಿಸಿದ್ದಾರೆ.
ಸ್ನೇಹಿತರನ್ನು ತನಿಖೆ ನಡೆಸಿ ಸ್ಪಷ್ಟವಾದ ಮಾಹಿತಿ ಯನ್ನು ಪಡೆಯಲಾಗುತ್ತದೆ ಎಂದು ಎಸ್.ಐ.ಹರೀಶ್ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಇನ್ಸ್ ಪೆಕ್ಟರ್ ಶಿವಕುಮಾರ್ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳದಲ್ಲಿ ನರಿಕೊಂಬು ಗ್ರಾ.ಪಂ..ಅಧ್ಯಕ್ಷ ಸಂತೋಷ್ ಹಾಗೂ ಗ್ರಾಮಸ್ಥರು ಜಮಾಯಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...