ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಬಿ ಅವರ ತಂಡ 13.02.2024 ರಂದು ಇಲಾಖಾ ವಾಹನದಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಪೊಳಲಿ ಕಡೆಯಿಂದ ಟಿಪ್ಪರ್ ಲಾರಿಯೊಂದು ಬರುವುದನ್ನು ಕಂಡು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಈ ವೇಳೆ ಲಾರಿ ಚಾಲಕ ಮೊಹನ್ ಕೆ ಎಂಬಾತನಲ್ಲಿ ವಿಚಾರಿಸಿದಾಗ ಅಕ್ರಮವಾಗಿ ಅಡ್ಡೂರು ಹೊಳೆಯ ಬದಿಯಲ್ಲಿ ಇಸ್ಮಾಯಿಲ್ ಎಂಬುವವರ ದಕ್ಕೆಯಲ್ಲಿ ಲೋಡು ಮಾಡಿರುವುದಾಗಿ ತಿಳಿದುಬಂದಿದೆ.
ಕೂಡಲೇ ಆರೋಪಿ ಮೋಹನ್ ಕೆ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಲಾರಿ ಮತ್ತು ಮರಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಟಿಪ್ಪರ್ ಲಾರಿಯ ಅಂದಾಜು ಮೌಲ್ಯ ರೂ 5 ಲಕ್ಷ, ಹಾಗೂ ಮರಳಿನ ಅಂದಾಜು ಮೌಲ್ಯ ರೂ 5000 ಆಗಬಹುದು ಎಂಡು ಅಂದಾಜಿಸಲಾಗಿದೆ..