Wednesday, February 12, 2025

ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ

ಕಲ್ಲಡ್ಕ: ಬ್ಯಾಕಿನ ವ್ಯವಹಾರದ ಜತೆಗೆ ಗ್ರಾಹಕರ ಆರೋಗ್ಯದ ಕಡೆ ಗಮನ ಹರಿಸಿದ ಬ್ಯಾಂಕಿನ ಕಾರ್ಯ ಅಭಿನಂದನದಾಯಕವಾಗಿದೆ ಎಂದು ಮಾಜಿ ಶಾಸಕರಾದ ಏ ಪೂಜಾರಿ ಏಳ್ತಿಮಾರ್ ಅಭಿಪ್ರಾಯ ಪಟ್ಟರು ಹೇಳಿದರು.

ಅವರು ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ( ನಿ) ಕಲ್ಲಡ್ಕ ಶಾಖೆ ಪ್ರಾರಂಭವಾಗಿ ಹತ್ತು ವರ್ಷ ಪೂರ್ಣಗೊಳಿಸಿದ್ದರ ಪ್ರಯುಕ್ತ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕೆ ಎಮ್ ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ, ಗುರೂಜಿ ಸ್ವ- ಸಹಾಯ ಸಂಘ ಕಲ್ಲಡ್ಕ, ಸುರಕ್ಷ ಸಂಗಮ ಪೂರ್ಲಿಪಾಡಿ, ಜಾನ್ಸಿರಾಣಿ ಲಕ್ಷ್ಮೀಬಾಯಿ ಮಹಿಳಾ ಮಂಡಳಿ ಕಲ್ಲಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿಸ್ತಾ ಶಿಬಿರವನ್ನು ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಉದ್ಘಾಟಿಸಿ ಮಾತನಾಡಿದರು.

ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ( ನಿ) ಇದರ ನಿರ್ದೇಶಕರಾದ ಸಂಜೀವ ಪೂಜಾರಿ ಗುರುಕೃಪಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಂಘದ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಸಂಘವು ಬ್ಯಾಂಕಿನ ವ್ಯವಹಾರದ ಜೊತೆಗೆ ಮಾಡುವ ಇತರ ಸೇವಾ ಚಟುವಟಿಕೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಗುರೂಜಿ ಸ್ವ ಸಹಾಯ ಸಂಘದ ಅಧ್ಯಕ್ಷರಾದ ಪೂವಪ್ಪ ಟೈಲರ್, ಸುರಕ್ಷಾ ಸಂಗಮ ಪೂರ್ಲಿಪಾಡಿ ಇದರ ಗೌರವಾಧ್ಯಕ್ಷರಾದ ವೆಂಕಟರಾಯ ಪ್ರಭು. ಝಾನ್ಸಿ ರಾಣಿ ಲಕ್ಷ್ಮೀಬಾಯಿ ಮಹಿಳಾ ಮಂಡಳಿ ಇದರ ಅಧ್ಯಕ್ಷರಾದ ಮೀನಾಕ್ಷಿ ಅರ್ ಪೂಜಾರಿ , ಕೆಎಂಸಿ ಆಸ್ಪತ್ರೆ ಕ್ಯಾನ್ಸರ್ ಚಿಕಿತ್ಸೆ ತಜ್ಞರಾದ ಡಾಕ್ಟರ್ ಶೌರ್ಯ ಬ್ಯಾನರ್ಜಿ,ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ದಂತ ವೈದ್ಯರಾದ ಡಾಕ್ಟರ್ ಅಪರ್ಣ, ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗೆ ವಿವಿಧೋದ್ದೇಶ ಸಹಕಾರ ಸಂಘದ ಜೊತೆಗೆ ಸಹಕರಿಸಿದ ಆಸ್ಪತ್ರೆ, ಹಾಗೂ ಸಂಘ ಸಂಸ್ಥೆಗಳನ್ನು ಅಭಿನಂದನ ಪತ್ರ ನೀಡಿ ಗೌರವಿಸಲಾಯಿತು.

ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಯತಿನ್ ಕುಮಾರ್ ಸ್ವಾಗತಿಸಿ, ಕಲ್ಲಡ್ಕ ಶಾಖ ವ್ಯವಸ್ಥಾಪಕಿ ಬಬಿತಾ ವಂದಿಸಿ ಗುರುದೇವ ವಿವಿದೋದ್ದೇಶ ಸಹಕಾರ ಸಂಘ( ನಿ) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಅಶ್ವಥ್ ಕಾರ್ಯಕ್ರಮ ನಿರೂಪಿಸಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...