ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಪ್ರಥಮ ಬಿ.ಎ ವಿದ್ಯಾರ್ಥಿ ಹರ್ಷಿತ್ ಕೆ ಮತ್ತು ಗಗನ್ ಇವರು ಸುಬ್ರಹ್ಮಣ್ಯ ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಫೆ. 23ರಂದು ನಡೆದ ಅಂತರ್ ಕಾಲೇಜು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ’ಡ್ರೀಮ್ಸ್-2019’ ಕಾರ್‍ಯಕ್ರಮದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.



ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.