ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ದ್ವಿತೀಯ ವರ್ಷದ ಎಂ.ಕಾಂ ವಿದ್ಯಾರ್ಥಿನಿ ಶೆಟ್ಟಿ ರಿದಿಶಾ ದಿನೇಶ್ ಇವರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ಫೆ.23ರಂದು ನಡೆಸಿದ ಅಂತರ್ ಕಾಲೇಜು ಸ್ನಾತಕೋತ್ತರ ವಿದ್ಯಾರ್ಥಿಗಳ ರಿಸರ್ಚ ಕ್ವಾನ್ಕ್ಲೇವ್ ’ಅನ್ವೇಷಣಾ-2019’ರ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.


