ಬಂಟ್ವಾಳ: ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯ ಮುಖ್ಯ. ಉತ್ತಮ ಆರೋಗ್ಯದಿಂದ ಎಲ್ಲವನ್ನೂ ಸಾಧಿಸಲು ಸಾಧ್ಯ. ಸದೃಢವಾದ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಾಂಡುರಂಗ ನಾಯಕ್ ಹೇಳಿದರು.
ಅವರು ಇಂದು ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ 2018-19ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುತ್ತಿದ್ದರು. ಕ್ರೀಡಾರಂಗವು ಪ್ರತಿಯೊಬ್ಬನಿಗೂ ವ್ಯಕ್ತಿತ್ವ ವಿಕಸಕ್ಕೆ ಪೂರಕ. ಕ್ರೀಡೆಯಲ್ಲಿ ತೊಡಗಿಸಿಕೊಂಡವರು ಉತ್ತಮ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ. ಆದುದರಿಂದ ಎಲ್ಲರೂ ಹೆಚ್ಚಿನ ಪ್ರಮಾಣದಲ್ಲಿ ಕ್ರೀಡಾಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದವರು ಕರೆಯಿತ್ತರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ರಾಧೇಶ್ ಕುಮಾರ್ ಸಮಯೋಜಿತ ಮಾತುಗಳೊದಿಗೆ ಶುಭ ಹಾರೈಸಿದರು.
ಉಪಪ್ರಾಂಶುಪಾಲರಾದ ಡಾ. ಎಚ್ ಆರ್ ಸುಜಾತ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾಲೇಜಿನ ಕ್ರೀಡಾ ನಿರ್ದೇಶಕರಾದ ಲೆ. ಸುಂದರ್ ವಂದಿಸಿದರು. ಉಪನ್ಯಾಸಕ ಕಿಟ್ಟು ರಾಮಕುಂಜ ಕಾರ್ಯಕ್ರಮ ನಿರೂಪಿಸಿದರು. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಬಾಲಕೃಷ್ಣ ಗೌಡ, ಗ್ರಂಥಾಲಯ ಸಹಾಯಕಿ ವಿನಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ರೀಡಾ ಸಹಾಯಕ ಪ್ರದೀಪ್ ಪೂಜಾರಿ ಸಹಕರಿಸಿದರು.
