Friday, January 30, 2026

ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್‌ಐ ಆಗಿ ಕಲೈಮಾರ್ ಪಿ. ಅವರು ಅಧಿಕಾರ ಸ್ವೀಕಾರ

 

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್‌ಐ ಆಗಿ ಕಲೈಮಾರ್ ಪಿ. ಅವರು ಇಂದು ಅಧಿಕಾರ ಸ್ವೀಕರಿಸಿದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿದ್ದ ಪ್ರಸ್ತುತ ಎಸ್‌ಐ ಆಗಿ ಪದೋನ್ನತ್ತಿ ಹೊಂದಿದ್ದಾರೆ.


ಪೊಲೀಸ್ ಇಲಾಖೆಯಲ್ಲಿ ಕಳೆದ 27 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಅವರು ಈ ಹಿಂದೆ ಬೆಳ್ತಂಗಡಿಯಲ್ಲಿ ಎಎಸ್‌ಐಯಾಗಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮಾರ್ಗದರ್ಶನ ಪಡೆದರು. ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರು ಪೊಲೀಸ್ ಸ್ಟಾರ್ ತೊಡಿಸಿ ಅಧಿಕಾರ ನೀಡಿದರು.

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...