Wednesday, February 12, 2025

ದಂಡ ಹಾಕಿದಕ್ಕೆ ಆಕ್ರೋಶ : ಸರಕಾರಿ ‌ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಆಟೋ ಚಾಲಕ, ಪ್ರಕರಣ ದಾಖಲು

ಬಂಟ್ವಾಳ: ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ‌ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಿಸಿರೋಡಿನ ‌ಕೈಕಂಬ ಎಂಬಲ್ಲಿ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದ್ದು , ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಅನಾಹುತಕ್ಕೆ ಕಾರಣನಾದ ಚಾಲಕನನ್ನು ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದಯ,ಸದ್ಯ ತಲೆಮರೆಸಿಕೊಂಡಿದ್ದಾನೆ.

ಟ್ರಾಫಿಕ್ ಎಸ್‌ಐ.ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ, ಯೂನಿಫಾರ್ಮ್ ( ಡ್ರೆಸ್ ಕೋಡ್) ಹಾಕದೆ ಮೊಬೈಲ್ ನಲ್ಲಿ ಮಾತನಾಡಿಕೊಂಡು ರಿಕ್ಷಾ ಓಡಿಸುತ್ತಿದ್ದ ಚಾಲಕನನ್ನು ನಿಲ್ಲಿಸಿ , ಆತನ ಮೇಲೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕಾಗಿ 2 ಸಾವಿರ ದಂಡ ಹಾಕಿ ನೋಟೀಸ್ ನೀಡಿದರು.

ಇದೇ ಕಾರಣದಿಂದ ಸಾರ್ವಜನಿಕವಾಗಿ ಬೀದಿ ರಂಪಾಟ ಮಾಡಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಅನ್ಸಾರ್ ಬಳಿಕ ರಿಕ್ಷಾವನ್ನು ಪೋಲೀಸರ ಎದುರಿನಲ್ಲಿಯೇ ಸುಟ್ಟುಹಾಕುವುದಾಗಿ ಬೆದರಿಸಿದ.ಬಳಿಕ ಎಸ್ ಐ ಹಾಗೂ ಜೀಪ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ನೀಡಲು ಮುಂದಾದ. ಎಸ್.ಐ.ಅವರು ಆತನ ಮೇಲೆ ದೂರು ನೀಡಿದ್ದಾರೆ. ಇದೀಗ ಈತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...