Saturday, February 8, 2025

ಸ್ನೇಹಿತರ ಜೊತೆ ಸ್ನಾನಕ್ಕೆ ಬಂದಿದ್ದ ಯುವಕ ನೇತ್ರಾವತಿ ನದಿಗೆ ಬಿದ್ದು ಸಾವು…ಸಾವಿನ ಕುರಿತು ಸಂಶಯ… ಪೊಲೀಸರಿಂದ ತನಿಖೆ

ಬಂಟ್ವಾಳ: ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಮಾ.18 ರಂದು ನೇತ್ರಾವತಿ ನದಿ ನೀರಿಗೆ ಬಿದ್ದು ಬೆಳ್ತಂಗಡಿ ಮೂಲದ ಯುವಕನೋರ್ವ ಮೃತಪಟ್ಟಿರುವ ಕುರಿತು ಹಲವು ಸಂಶಯಗಳು ಹುಟ್ಟಿಕೊಂಡಿದ್ದು, ಮೃತರ ಸಂಬಂಧಿಕರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಡ ಗ್ರಾಮದ ಮಂಜೊಟ್ಟಿ ನಿವಾಸಿ ಲೋಹಿತಾಶ್ವ ಅವರು ಕಾರಿನಲ್ಲಿ ನಾಲ್ವರು ಸ್ನೇಹಿತರ ಜತೆ ಶಂಭೂರಿನ ನೇತ್ರಾವತಿ ನದಿ ತೀರಕ್ಕೆ ಆಗಮಿಸಿದ್ದರು. ಈ ವೇಳೆ ಲೋಹಿತಾಶ್ವ ಅವರ ಮೃತದೇಹ ನೀರಿನಲ್ಲಿ ಪತ್ತೆಯಾಗಿದ್ದು, ಅದರ ದೇಹದಲ್ಲಿ ಬಟ್ಟೆ, ಕೈಯಲ್ಲಿ ವಾಚ್ ಇದ್ದ ಕಾರಣ ಅವರು ಸ್ನಾನಕ್ಕೆಂದು ನದಿಗೆ ಇಳಿದಿರಲಿಲ್ಲ. ಹಾಗಾದರೆ ಅವರು ಯಾವ ರೀತಿ ಮೃತಪಟ್ಟಿದ್ದಾರೆ ಎಂಬ ಸಂಶಯಗಳು ಹುಟ್ಟಿಕೊಂಡಿತ್ತು.

ಘಟನೆಯ ಕುರಿತು ಲೋಹಿತಾಶ್ವ ಅವರ ಪತ್ನಿಯ ತಮ್ಮ ಕಳಿಯ ಗ್ರಾಮ ನಿವಾಸಿ ಸಂದೀಪ್ ಪೊಲೀಸರಿಗೆ ದೂರು ನೀಡಿದ್ದು, ಭಾವನ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಸಾವಿನ ನೈಜ ಕಾರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮಾ.20 ರಂದು‌ ಮಂಗಳವಾರ ಮೃತದೇಹವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಳಿಕ ಸ್ಪಷ್ಟವಾದ ಕಾರಣ ತಿಳಿದುಬರಬಹುದು.

ಇಲ್ಲಿಗೆ ಯಾಕೆ ಬಂದಿದ್ದರು

ಸ್ನೇಹಿತರು ಜೊತೆಯಾಗಿ ಸ್ನಾನ ಮಾಡುವ ಉದ್ದೇಶದಿಂದ ಬೆಳ್ತಂಗಡಿ ತಾಲೂಕಿನಿಂದ ಬಂಟ್ವಾಳ ತಾಲೂಕಿಗೆ ಯಾಕೆ ಬಂದಿದ್ದಾರೆ. ಮತ್ತು ಶಂಭೂರು ಗ್ರಾಮಕ್ಕೆ ಯಾಕೆ ತೆರಳಿದ್ದರು ಎಂಬ ಅನೇಕ ಸಂಶಯವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ. ಎಲ್ಲಾ ಸಂಶಯಗಳಿಗೆ ಉತ್ತರ ಪೋಲೀಸ್ ತನಿಖೆಯ ಬಳಿಕ ತಿಳಿಯಬೇಕಾಗಿದೆ. ಪೋಲೀಸ್ ಇಲಾಖೆ ಸರಿಯಾದ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಿದ್ದಾರೆ.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಾರ್ಮಿಕರ ಸಮಸ್ಯೆ ಮತ್ತು ಮಂಗಳೂರಿನ ಇಎಸ್ಐ ಆಸ್ಪತ್ರೆಯ ಸಮಸ್ಯೆಯ ಪರಿಹಾರಕ್ಕಾಗಿ, ದೆಹಲಿಯಲ್ಲಿ ಇಎಸ್ಐಸಿ ಡಿಜಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ

  ನವದೆಹಲಿ: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನವದೆಹಲಿಯಲ್ಲಿ ಇಂದು ಇಎಸ್ಐಸಿ ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಂಗಳೂರಿನ ಇಎಸ್ಐ ಆಸ್ಪತ್ರೆ...

ಮಾಣಿಯಲ್ಲಿ ಟ್ರಾಫಿಕ್ ಜಾಮ್

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ರಸ್ತೆಯ ಮಧ್ಯೆ ಮಾಣಿಯಲ್ಲಿ ಇಂದು ಮಧ್ಯಾಹ್ನ ವೇಳೆ ಸುಮಾರು ತಾಸುಗಳ ಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿರುವ ಘಟನೆ ನಡೆದಿದ್ದು, ಪ್ರಯಾಣಿಕರು ತೊಂದರೆಯಲ್ಲಿ ಸಿಲುಕಿದ...