ಬಂಟ್ವಾಳ: ಸರಪಾಡಿ ಗ್ರಾಮದ ಪೆರ್ಲ ದರ್ಖಾಸು ನಿವಾಸಿ ಯುವಕನೋರ್ವ ಮನೆಯ ಹಿಂಬದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಪೆರ್ಲ ದರ್ಖಾಸು ನಿವಾಸಿ ಕೃಷ್ಣಪ್ಪ ನಾಯ್ಕ್ ಅವರ ಪುತ್ರ ವಿನೋದ್ ನಾಯ್ಕ್(೩೩) ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕ ಕೂಲಿ ಕೆಲಸ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತ ಯುವಕ ಅವಿವಾಹಿತನಾಗಿದ್ದು, ತಂದೆ- ತಾಯಿ, ಅಕ್ಕ ಹಾಗೂ ತಮ್ಮನನ್ನು ಅಗಲಿದ್ದಾನೆ.
ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮೃತ ಯುವಕನ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.