Friday, February 6, 2026

ನಿರುದ್ಯೋಗದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ ; ಸ್ಥಳೀಯರಿಂದ ರಕ್ಷಣೆ

ಬಂಟ್ವಾಳ: ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಚಿಂತೆಯಲ್ಲಿ ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ನಡೆದಿದೆ.

ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ ಎಂಬಾತನೇ ಪಾಣೆಮಂಗಳೂರಿನಲ್ಲಿ ನೇತ್ರಾವತಿಗೆ ಹಾರಲು ಯತ್ನಿಸಿದ ಯುವಕ. ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.

ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ದತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿ ಯುವಕರಾದ ಹನೀಫ್@ಹನೀಫ್ ಬಾಯಿ, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆಯ ದವಡೆಯಿಂದ ಪಾರು ಮಾಡಿ 112 ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಹೆದ್ದಾರಿಯಲ್ಲಿ ದಾರಿ ಸೂಚನಾ ಫಲಕ ಅಳವಡಿಕೆ..

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿರೋಡ್ - ಅಡ್ಡಹೊಳೆ ಚತುಷ್ಪಥ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೀಗ ಕಮಾನು ಮಾದರಿಯಲ್ಲಿ ದಾರಿ ಸೂಚಕ ಫಲಕ ಅಳವಡಿಕೆಯ ಕಾರ್ಯ ಆರಂಭಗೊಂಡಿದೆ. ರಸ್ತೆ ನಿರ್ಮಾಣದ ಕಾಂಕ್ರೀಟ್ ಕಾಮಗಾರಿ...