ಬೆಂಗಳೂರು: ಇಲ್ಲಿನ ಪಾದರಾಯನಪುರದಲ್ಲಿ ನಡೆದ ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 59 ಮಂದಿಯನ್ನು ಬಂಧಿಸಲಾಗಿದೆ. 5 ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಂಬಂಧ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಂತಹ ಕೃತ್ಯಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ. ಇನ್ನೂ ಕಾರ್ಯಾಚರಣೆ ಮುಂದುವರೆದಿದ್ದು, ಎಲ್ಲರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.


