Thursday, June 26, 2025

ಇಡೀ ವಿಶ್ವಾದ್ಯಂತ ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎನ್ನುವುದಾದರೆ ಅದು ಭಾರತ ಮತ್ತು ಕರ್ನಾಟಕದಲ್ಲಿ ಮಾತ್ರ: ಸಚಿವ ಬಿ.ಸಿ. ಪಾಟೀಲ್

ಚಿತ್ರದುರ್ಗ: ಇಡೀ ವಿಶ್ವಾದ್ಯಂತ ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎನ್ನುವುದಾದರೆ ಅದು ಭಾರತ ಮತ್ತು ಕರ್ನಾಟಕದಲ್ಲಿ ಮಾತ್ರ. ಆದರೆ ವಿರೋಧ ಪಕ್ಷದವರು ಟೀಕಿಸುವುದನ್ನು ಕಾಯಕ ಮಾಡಿಕೊಂಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಗರೀಬ್ ಕಲ್ಯಾಣ್ ಯೋಜನೆಯನ್ನು ವಿಸ್ತರಿಸಿರುವುದು ನಮ್ಮಿಂದಲೇ ಎಂದು ಕಾಂಗ್ರೆಸ್ ಬಿಂಬಿಸಿಕೊಂಡಿದೆ. ಆದರೆ ಅವರಿಗೆ ಕೇಳಿಕೊಂಡು ಮಾಡುವಂಥದ್ದು ಏನು ಇಲ್ಲ ಎಂದು ತಿರುಗೇಟು ನೀಡಿದರು. ಅತ್ಯಂತ ಶಿಸ್ತಿನಿಂದ ಕಟ್ಟುನಿಟ್ಟಾಗಿ ಪ್ರಧಾನಿಗಳು ಲಾಕ್ಡೌನ್ ಘೋಷಿಸಿದ್ದರು. ಕರ್ನಾಟಕ ಸರ್ಕಾರ ಸಹ ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ವಹಿಸಿದೆ. ಕ್ವಾರೆಂಟೇನ್ ಆಗದೇ ನೇರ ಮನೆಗೆ ಹೋದವರಿಂದಲೂ ಸೋಂಕು ಹೆಚ್ಚಿದೆ. ಹೊರ ರಾಜ್ಯದಿಂದ ಬಂದವರಿಂದಲೇ ಕೊರೊನಾ ಹೆಚ್ಚಿದೆ. ನಮ್ಮ ಪ್ರಧಾನಿ ಹಾಗು ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಹರಡುವುದನ್ನು ನಿಯಂತ್ರಿಸುವಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ರಧಾನ ಮಂತ್ರಿಗಳನ್ನು ಹೊಗಳಿದರೆ ಅವರ ಸ್ಥಾನ ಕಳೆದುಕೊಳ್ಳುತ್ತಾರೆ. ಅದಕ್ಕೋಸ್ಕರ ಪ್ರಧಾನಿಯವರನ್ನು ಟೀಕಿಸುತ್ತಾರೆ. ಜನರ ಮುಂದೆ ಕೊರೊನಾಗೆ ಸಂಬಂಧಿಸಿದಂತೆ ಖರ್ಚು ವೆಚ್ಚದ ಶ್ವೇತ ಪತ್ರ ಹೊರಡಿಸುತ್ತೇವೆ ಎಂದರು.

 

ಶೀಥಲೀಕರಣಗಳಲ್ಲಿ ರೈತರು ತಮ್ಮ ಬೆಳೆಗಳನ್ನು ದಾಸ್ತಾನು ಮಾಡಿ ಬೆಲೆ ಬಂದಾಗ ಅವುಗಳನ್ನು ಬಳಸುವಂತಹ ವ್ಯವಸ್ಥೆಯನ್ನು ಲಾಕ್ಡೌನ್ ಸಂದರ್ಭದಲ್ಲಿ ರೈತರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಬದುಕಿದ್ದವರಿಗೆ ಎಷ್ಟು ಗೌರವ ಕೊಡುತ್ತೇವೋ ಸಾವನ್ನಪ್ಪಿದ್ದವರಿಗೂ ಅಷ್ಟೇ ಗೌರವ ಕೊಡಬೇಕು.
ನಮ್ಮ ಸಂಸ್ಕೃತಿಯಲ್ಲಿ ಬದುಕಿದ್ದವರು ಸತ್ತ ಮೇಲೂ ಗೌರವ ಕೊಡುತ್ತೇವೆ.
ಬಳ್ಳಾರಿಯಲ್ಲಿ ಅಮಾನವೀಯವಾಗಿ ಯಾರಾದರೂ ಕೋವಿಡ್ ಸೋಂಕಿತರ ಶವಸಂಸ್ಕಾರ ಮಾಡಿದ್ದರೆ ಅದು ಖಂಡನೀಯ. ಘಟನೆಗೆ ಕಾರಣರಾದವರನ್ನು ಅಮಾನತು ಮಾಡಲಾಗಿದೆ ಎಂದು ಬಿ.ಸಿ.ಪಾಟೀಲ್ ಹೇಳಿದರು.

ಲಾಕ್ ಡೌನ್ ಆಗುತ್ತದೆ ಎಂಬ ಭರವಸೆ ನನಗಿಲ್ಲ.
ಲಾಕ್ ಡೌನ್ ಆಗಬಾರದು, ಅದು ಖಂಡಿತಾ ಪರಿಹಾರವಲ್ಲ.ಲಾಕ್ ಡೌನ್ ಹೋಗಿದೆ ಅಷ್ಟೇ, ಕೊರೊನಾ ಹೋಗಿಲ್ಲ .ಜನರು ಸುರಕ್ಷತೆಯಿಂದ ಇರುವುದನ್ನು ಕಲಿತುಕೊಳ್ಳಬೇಕು. ಸ್ಯಾನಿಟೈಜರ್ ಮಾಸ್ಕ್ ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಸೋಂಕು ಇರುವವರು ಪರೀಕ್ಷೆ ಮಾಡಿಸಿಕೊಳ್ಳಲು ಸಹಕರಿಸಬೇಕು ಎಂದು ಮನವಿ ಮಾಡಿದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...