Tuesday, January 27, 2026

ನಕಲಿ ಬೀಜ ಮಾರಾಟ ಮಾಡುವುದು ರೈತರ ಬದುಕನ್ನು ಸಾಯಿಸಿದಂತೆ: ಬಿ.ಸಿ.ಪಾಟೀಲ್

ಬೆಂಗಳೂರು: ಸತ್ತ ಬೀಜಗಳನ್ನು ನಕಲಿ ಬೀಜಗಳನ್ನು ಮಾರಾಟ ಮಾಡುವುದು ರೈತರ ಬದುಕನ್ನು ಸಾಯಿಸುವಂತಹ ಮಹಾಪರಾಧವಾಗಿದೆ.
ಇಂತಹ ನಕಲಿ ಬಿಡಿ ಬೀಜ ಮಾರಾಟಗಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಹಾವೇರಿ ಜಿಲ್ಲಾ ಕೃಷಿ ಅಧಿಕಾರಿಗಳ ತಂಡ ಸುಮಾರು 6ಕೋಟಿ ರೂ.ಮೌಲ್ಯದ ಅಕ್ರಮ ಬಿಡಿಬೀಜಗಳ ದಾಸ್ತಾನು ವಶಪಡಿಸಿಕೊಂಡಿದ್ದು, ಕೃಷಿ ಅಧಿಕಾರಿಗಳ ಕಾರ್ಯಕ್ಕೆ ಕೃಷಿ ಸಚಿವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇಂತಹ ಕಳಪೆ ನಕಲಿ ಬೀಜ ಮಾರಾಟ ಮಾಡುವವರು ಬದುಕಿದ್ದಂತಹ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ‌.ಇಂತಹ ಕೃತ್ಯವನ್ನು ತಾವೆಂದಿಗೂ ಸಹಿಸುವುದಿಲ್ಲ. ಕೃಷಿ ಅಧಿಕಾರಿಗಳು ಮತ್ತು ವಿಚಕ್ಷಣಾ ತಂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದಾರೆ.ನಕಲಿ ಕಳಪೆ ಅಕ್ರಮ ಬೀಜವಾಗಲಿ ಗೊಬ್ಬರವಾಗಲಿ ಮಾರಾಟ ಮಾಡುವವರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ.ಹಾವೇರಿಯಲ್ಲಿ ಪತ್ತೆಯಾದ ನಕಲಿ ಬಿಡಿ ಬೀಜಗಳ ದಾಸ್ತಾನು ವಶ ಪ್ರಕರಣವನ್ನು ನ್ಯಾಯಾಲಯದ ವಶಕ್ಕೆ ವಹಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...