ವಿಟ್ಲ: ವಿಟ್ಲ ಒಕ್ಕೆತ್ತೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ವಿ.ಸುಬ್ಬಲಕ್ಸ್ಮಿ ಇವರು ನಿವೃತ್ತರಾಗಿದ್ದು ಇವರ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು ಶಾಲಾ ಸಭಾ ಭವನದಲ್ಲಿ ನಡೆಯಿತು.
ಈ ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕಿ ಪುಷ್ಪಾ ಹೆಚ್, ಗಣಪತಿ ಭಟ್ ಪುತ್ತೂರು, ಎಸ್‌ಡಿಎಂಸಿ ಅಧ್ಯಕ್ಷ ಮಹಮ್ಮದ್ ಹಾರಿಸ್ ಸಿ.ಹೆಚ್ ಮತ್ತು ಸದಸ್ಯರು, ಸಮೂಹ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಶಾಲೆಗೆ ಪ್ರೊಜೆಕ್ಟರನ್ನು ಕೊಡುಗೆಯಾಗಿ ನೀಡಿದರು. ಶಿಕ್ಷಕ ವೃಂದದವರು, ಮಕ್ಕಳು, ಪೋಷಕರು ಮತ್ತು ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.
