ಬೆಳ್ಳಾರೆ: ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ , ಪೋಲೀಸ್ ಠಾಣೆಯ ಮುಂದೆ ಕಾರ್ಯಕರ್ತರ ಜಮಾವಣೆ.



ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಮತಹ ಘಟನೆಯೊಂದು ಜರುಗಿದೆ . ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ ಘಟನೆ ಸೆ 10 ರಂದು ಬೆಳಿಗ್ಗೆ ಬೆಳ್ಳಾರೆಯಲ್ಲಿ ನಡೆದಿದೆ.
ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಓರ್ವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಶಫೀಕ್ ಸಹೋದರ, ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.
ಇಂದು ಸಂಜೆ ಆರೋಪಿ ಎನ್ನಲಾದ ಸಫ್ರಿದ್ ಹಿಂದೂ ಕಾರ್ಯ ಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬಳಿಕ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗೆಗಿನ ಆಡಿಯೋ ರೆಕಾರ್ಡ್ ಸಾಕ್ಷಿ ಹಿಂದೂ ಕಾರ್ಯಕರ್ತನ ಬಳಿ ಇದೆ ಎನ್ನಲಾಗುತ್ತಿದೆ.ಈ ಬಗ್ಗೆ ಬೆಳ್ಳಾರೆ ಪೋಲೀಸ್ ಠಾಣೆಯ ಲ್ಲಿ ದೂರು ನೀಡಿದ್ದು,
ಮಾಹಿತಿ ತಿಳಿಯುತ್ತಲೇ ನೂರಾರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿದ್ದಾರೆ. ಸಫ್ರೀದ್ ನನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಮನೆ ಮಾಡಿದೆ .












