ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಮೂರ್ಜೆಯಲ್ಲಿ ದ್ವಿಚಕ್ರವಾಹನ ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಾವೂರು ಗ್ರಾಮದ ನಿವಾಸಿ ಸಂಜೀವ ಅವರ ಪತ್ನಿ ಕಮಲಾ ಮೃತ ಮಹಿಳೆ.
ದ್ವಿಚಕ್ರವಾಹನದಲ್ಲಿ ಅವರು ಸಹ ಸವಾರೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನ ಮಗುಚಿ ಬಿದ್ದಿದೆ. ಕಮಲಾ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭಿರವಾಗಿ ಗಾಯಗೊಂಡಿದ್ದರು.
ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ.