Wednesday, February 12, 2025

ಓವರ್ ಟೇಕ್ ವಿಚಾರಕ್ಕೆ ಆ್ಯಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಸೈಡ್‌ ಕೊಡುವ ವಿಚಾರಕ್ಕೆ ಬೆಂಗಳೂರು ಮೂಲದ ಕಾರು ಚಾಲಕನೋರ್ವ ಪಶು ಇಲಾಖೆಯ ಆ್ಯಂಬುಲೆನ್ಸ್‌ ಅನ್ನು ತಡೆದು ಚಾಲಕನಿಗೆ ಹಲ್ಲೆ ನಡೆಸಿದ ಘಟನೆ ಲಾೖಲ ಜಂಕ್ಷನ್‌ ಬಳಿ ನಡೆದಿದೆ.

ಹಲ್ಲೆಗೆ ಒಳಗಾಗಿರುವ ಆ್ಯಂಬುಲೆನ್ಸ್‌ ಚಾಲಕ ಕಡಬದ ತಾಲೂಕು ವಿದ್ಯಾನಗರ ನಿವಾಸಿ ಸುಬ್ರಹ್ಮಣ್ಯ ಗ್ರಾಮದ ರಕ್ಷಿತ್‌ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರು, ಮಲ್ಲೇಶ್ವರದ ನಿವಾಸಿ ಶರತ್‌ ರಾಮಚಂದ್ರ ಹಲ್ಲೆ ನಡೆಸಿದ ಆರೋಪಿ.

ಕೊಕ್ಕಡದ 1962 ಪಶುಸಂಗೋಪನ ಇಲಾಖೆಯ ಆ್ಯಂಬುಲೆನ್ಸ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ರಕ್ಷಿತ್‌ಗೆ ಬೆಳ್ತಂಗಡಿಯ ನೆರಿಯದಲ್ಲಿ ಅಗತ್ಯ ಸೇವೆ ಒದಗಿಸುವಂತೆ ಇಲಾಖೆಯ ಆ್ಯಪ್‌ ಮೂಲಕ ಸಂದೇಶ ಬಂದಿತ್ತು. ಅದರಂತೆ ಅಲ್ಲಿಗೆ ತೆರಳುತ್ತಿದ್ದರು. ಆಗ ಲಾೖಲದಲ್ಲಿ ದಾರಿಕೊಡುವ ವಿಚಾರದಲ್ಲಿ ಗಲಾಟೆ ಮಾಡಿ ಕಾರು ಚಾಲಕ ಆ್ಯಂಬುಲೆನ್ಸ್‌ ಅನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ.

ಹೆದ್ದಾರಿ ಮಧ್ಯೆ ಈ ಘಟನೆ ನಡೆದಿದ್ದು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಪತಿ ಹಲ್ಲೆ ನಡೆಸುವ ವೇಳೆ ಜತೆಗಿದ್ದ ಪತ್ನಿ ಹಲ್ಲೆಗೆ ಪ್ರಚೋದಿಸಿರುವ ದೃಶ್ಯಗಳು ಮೊಬೈಲ್‌ ಕೆಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಹಲ್ಲೆ ಮಾಡುತ್ತಿದ್ದ ವ್ಯಕ್ತಿಯನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ

ರಕ್ಷಿತ್‌ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಾಲಕನಿಗೆ ಹಲ್ಲೆ ನಡೆಸಿರುವುದಲ್ಲದೆ 3 ಸಾವಿರ ರೂ.ನಷ್ಟು ಹಾನಿ ಮಾಡಿರುವುದಾಗಿ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...