Friday, January 30, 2026

ದ್ವಿಚಕ್ರ ವಾಹನ ಪಲ್ಟಿ : ಮಹಿಳೆ ಗಂಭೀರ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನವೊಂದು ಮಗುಚಿ ಬಿದ್ದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ಸಂಭವಿಸಿದೆ.

ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ ಗಾಯಗೊಂಡವರು.

ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದಲ್ಲಿ ಸಹ ಸವಾರರಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅವರಿದ್ದ ದ್ವಿಚಕ್ರ ವಾಹನ ತೋಟತ್ತಾಡಿ ಗ್ರಾಮದ ಮೂರ್ಜೆಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನ ಮಗುಚಿ ಬಿದ್ದಿದೆ. ಕಮಲ ರಸ್ತೆಗೆ ಎಸೆಯಲ್ಪಟ್ಟು ಗಂಭಿರವಾಗಿ ಗಾಯಗೊಂಡಿದ್ದಾರೆ.

ಅವರಿಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಸಂತೋಷ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...

Bantwal : ಮೇಯಲು ಬಿಟ್ಟ ಹಸುಗಳ ಕಳ್ಳತನ – ಆರೋಪಿಯ ಬಂಧನ

ಬಂಟ್ವಾಳ: ಮೇಯಲು ಹೋಗಿದ್ದ ಹಸುಗಳ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ. ಮಂಗಳೂರು ತಾಲೂಕಿನ ಉಳ್ಳಾಲ ನಿವಾಸಿ ಝಲ್ಫಾನ್ ಮಾಲಿಕ್ ( 30) ಎಂಬಾತನನ್ನು...

ವಿಟ್ಲ: ಬೆಂಕಿಗೆ ಆಹುತಿಯಾದ ಇಲೆಕ್ಟ್ರಾನಿಕ್ಸ್ ಅಂಗಡಿ, ಹೋಟೆಲ್, ಡ್ರೈವಿಂಗ್ ಸ್ಕೂಲ್

  ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಭಸ್ಮಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಸಂಪೂರ್ಣ...