ಮಂಗಳೂರು: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಇನ್ನೇನು ಕೆಲವೇ ಗಂಟೆಗಳಲ್ಲಿ ಆಗಮಿಸಲಿದ್ದಾರೆ. ಈ ನಡುವೆ ಮೋದಿ ಆಗಮನದ ಹಿನ್ನೆಲೆಯಲ್ಲಿ, ಬೆಳ್ತಂಗಡಿ ಬಿಜೆಪಿ ಘಟಕ ಮೈ ಭೀ ಚೌಕೀದಾರ್ ಅಭಿಯಾನ ನಡೆಸಲು ನಿರ್ಧರಿಸಿದ್ದು, ಪ್ರಧಾನಿ ಮೋದಿಯೆದುರು ಈ ಅಭಿಯಾನವನ್ನು ವಿಶೇಷ ರೀತಿಯಲ್ಲಿ ಅನಾವರಣಗೊಳಿಸಲು ಮಂಗಳೂರು ಬಿಜೆಪಿ ಘಟಕ ಸಿದ್ಧತೆ ನಡೆಸಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರೂ ಸೇರಿದಂತೆ ಸಾವಿರಕ್ಕೂ ಬಿಜೆಪಿ ಕಾರ್ಯಕರ್ತರು ಇಂದು ಮೈ ಭೀ ಚೌಕೀದಾರ್ ಎನ್ನುವ ಹೆಸರು ಪಟ್ಟಿಯೊಂದಿಗೆ ಕಾವಲುಗಾರನ ಸಮವಸ್ತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತನ್ನ ಚೌಕೀದಾರ್ ಸಮವಸ್ತ್ರದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಫೋಟೋ ವೈರಲ್ ಆಗಿದೆ.
