Tuesday, January 27, 2026

ಬೆಳ್ತಂಗಡಿಯಲ್ಲಿ ಪಿಕಪ್ ಢಿಕ್ಕಿ: ಬೈಕ್ ಸವಾರ ಸಾವು, ಸಹಸವಾರ ಗಂಭಿರ

ಬೆಳ್ತಂಗಡಿ: ಪಿಕಪ್ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಸೋಮಂದಡ್ಕ ಗ್ರಾಮದ ಸೀಟ್ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.

ಬೆಳ್ತAಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಸುದೀಪ್ ಭಂಡಾರಿ(34) ಮೃತಪಟ್ಟ ಬೈಕ್ ಸವಾರ. ಬೈಕ್‌ನಲ್ಲಿದ್ದ ಸಹ ಸವಾರ ಕೂಡಾ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸುದೀಪ್ ಭಂಡಾರಿಯ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಸುದೀಪ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎನ್ನಲಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...