Tuesday, July 8, 2025

ಬೆಳ್ತಂಗಡಿ ತಹಶಿಲ್ದಾರ್ ಗಣಪತಿ ಶಾಸ್ತ್ರೀ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿಯ ತಹಶಿಲ್ದಾರ್ ಗಣಪತಿ ಶಾಸ್ತ್ರೀ ಯವರನ್ನು ಸರಕಾರದ ಆದೇಶದ ಪ್ರಕಾರ ಚಾಮರಾಜನಗರಕ್ಕೆ ವರ್ಗಾವಣೆ ಮಾಡಲಾಯಿತು. ನೂತನ ತಹಶಿಲ್ದಾರರಾಗಿ ಚಾಮರಾಜನಗರದಲ್ಲಿ ಕಾರ್ಯನಿರ್ವಹಿಸುತಿದ್ದ ಮಹೇಶ್ ಜೆ. ಅವರನ್ನು ನೇಮಕ ಮಾಡಲಾಗಿದೆ.

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತರಾದ ಬಳಿಕ ತಹಶಿಲ್ದಾರರಾಗಿ ನೇಮಕಗೊಂಡಿದ್ದ ಇವರು ತಾಲೂಕಿನ ಅಕ್ರಮ ಗಣಿಗಾರಿಕೆ ಬ್ರೇಕ್ ಹಾಕಿದ್ದರು. ಬೆಳ್ತಂಗಡಿಯಲ್ಲಿ ಪ್ರವಾಹ ಬಂದಂತಹ ಸಂದರ್ಭದಲ್ಲಿ ಸಾಮಾನ್ಯರಂತೆ ಕೆಲಸ ಮಾಡಿದ್ದರು. ತಾಲೂಕು ಚುನಾವಣೆ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಅಗಿದ್ದರೂ ಸಾಮಾನ್ಯ ನೌಕರನಂತೆ ಮತ ಪೆಟ್ಟಿಗೆಯನ್ನು ಹೊತ್ತು ಭದ್ರತಾ ಕೇಂದ್ರಕ್ಕೆ ತಲುಪಿಸಿದ್ದರು. ಈಗ ಚಾಮರಾಜನಗರಕ್ಕೆ ಸರಕಾರದ ಆದೇಶದಂತೆ ವರ್ಗಾವಣೆಗೊಂಡಿರುವರು.

More from the blog

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ – ವಾರ್ಷಿಕ ಮಹಾಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2024 -25 ನೇ ಸಾಲಿನಲ್ಲಿ 371 ಲಕ್ಷ ರೂ.ವ್ಯವಹಾರ ನಡೆಸಿ 20.37 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ...

ಪ್ರೀಮಾ ಡಿಸೋಜರವರಿಗೆ ಪಿಎಚ್. ಡಿ. ಪದವಿ..

ಬಂಟ್ವಾಳ : ಮಣಿಪಾಲ ನರ್ಸಿಂಗ್ ಕಾಲೇಜಿನಲ್ಲಿ ಪ್ರಾದ್ಯಾಪಕಿಯಾಗಿ, ನರ್ಸಿಂಗ್ ವಿಭಾಗದಲ್ಲಿ ಸಂಶೋದನೆ ಕೈಗೊಂಡಿದ್ದ ಪ್ರೀಮ ಜೆನೆವಿವ್ ಜ್ಯೋತಿ ಡಿಸೋಜರವರು ಅದೇ ಕಾಲೇಜಿನ ಫಂಡಮೆಂಟಲ್ಸ್ ಆಫ್ ನರ್ಸಿಂಗ್ ವಿಭಾಗದ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ....