ಬೆಳ್ತಂಗಡಿ: ತಾಲೂಕಿನ ಪ್ರತಿಭಾನ್ವಿತ ಬಾಲಕಿ ಮೂರ್ಜೆ ಸುನಿತಾ ಪ್ರಭು ಅವರು ಈ ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಇಂದು ಗೌರವಾನ್ವಿತ ರಾಷ್ಟ್ರಪತಿ ರಮಾನಾಥ್ ಕೊವಿಂದ್ ಅವರಿಂದ ಪುರಸ್ಕಾರ ಪಡೆದರು. ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಘೋಷಿಸಲಾಗುವ ಪ್ರದಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಒಂದು ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಇವರು ಬೆಳ್ತಂಗಡಿ ಉದ್ಯಮಿ ವಿನಾಯಕ ವುಡ್ ಇಂಡಸ್ಟ್ರೀಸ್ ನ ಮಾಲಕ ವಿವೇಕಾನಂದ ಪ್ರಭು ಮತ್ತು ಶಾಂತಲಾ ಪ್ರಭು ದಂಪತಿಯ ಪುತ್ರಿ.
