Saturday, June 28, 2025

ಬೀಟ್ ಪೊಲೀಸರಿಂದ ಗ್ರಾಮಸ್ಥರು ಮೆಚ್ಚುವ ಕೆಲಸ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ಅಳದಂಗಡಿ ಹಾಗೂ ಜನಸ್ನೇಹಿ ಪೊಲೀಸ್ ವಾಟ್ಸಾಪ್ ಗ್ರೂಪ್ ವತಿಯಿಂದ ಲಾಕ್ ಡೌನ್ ಸಮಸ್ಯೆಯ ಈ ದಿನಗಳಲ್ಲಿ ಬಡಗಕಾರಂದೂರು, ಸುಲ್ಕೇರಿಮೊಗ್ರು, ಅಳದಂಗಡಿ ವ್ಯಾಪ್ತಿಯ ಪಿಲ್ಯ, ಕುದ್ಯಾಡಿ ಗ್ರಾಮಗಳಲ್ಲಿ ಅಗತ್ಯ ವಸ್ತುಗಳಿಗಾಗಿ ಹಾತೊರೆಯುವ ಕುಟುಂಬಗಳಿದ್ದಲ್ಲಿ ಅವರಿಗಾಗಿ ‘ಹಸಿವು-ಅನ್ನದ ತುತ್ತು’ ಸೇವಾಯೋಜನೆಯನ್ನು ಮಾಡಬೇಕೆಂದು ಯೋಚಿಸಿದಾಗ ಗ್ರೂಪ್ ನ ಬಹುತೇಕ ಮಂದಿ ಸಕಾರಾತ್ಮಕವಾಗಿ ಸ್ಪಂದಿಸಿ 25 ಕ್ವಿಂಟಲ್ ಅಕ್ಕಿ ಹಾಗೂ 250 ಡಬ್ಬ ಉಪ್ಪಿನಕಾಯಿಗೆ ಬೇಕಾಗುವಷ್ಟು ಸಹಕಾರ ಮಾಡಿದ್ದಾರೆ.


ಬೀಟ್ ಪೊಲೀಸ್ ಪ್ರಶಾಂತ್ ಕುಮಾರ್ ಅವರು ಈ ಯೋಜನೆಗೆ ಒಂದು ಕ್ವಿಂಟಲ್ ಅಕ್ಕಿ ನೀಡಿ ಸಹಕರಿಸಿದ್ದಾರೆ. ಈ ತಂಡ ಈಗಾಗಲೇ ಈ ನಾಲ್ಕು ಗ್ರಾಮಗಳಿಗೆ 100-150 ಬಡ ಕುಟುಂಬಗಳ ವಿವರ ಸಿಕ್ಕಿದ್ದು, 60 ಮನೆಗಳಿಗೆ ಅಕ್ಕಿ ಹಾಗೂ ಉಪ್ಪಿನಕಾಯಿ ವಿತರಿಸಿದ್ದಾರೆ.
ಬೀಟ್ ಪೋಲೀಸರ ಈ ಸೇವೆಯ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

More from the blog

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...