Tuesday, July 8, 2025

ಬೆಳ್ತಂಗಡಿ: ಪತ್ನಿಯನ್ನು ಕೊಲೆ ಮಾಡಿ ಪರಾರಿಯಾದ ಪತಿ

ಬೆಳ್ತಂಗಡಿ : ಪತಿ ಪತ್ನಿಯನ್ನು ಕೊಲೆಗೈದ ಘಟನೆ ತಾಲೂಕಿನ ಗೇರುಕಟ್ಟೆಯ ಕಜೆ ಎಂಬಲ್ಲಿ ನಡೆದಿದ್ದು, ಈ ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ಆರೋಪಿಯ ಹೆಸರು ಉಮ್ಮರ್ ಫಾರೂಕ್ ಎಂದು ತಿಳಿದು ಬಂದಿದೆ. ಆತನ ಪತ್ನಿ ಮೂಲತಃ ಪುತ್ತೂರು ಸಾಲ್ಮರದ ತಸ್ಲೀಮ (25) ಮೃತರು. ತಸ್ಲೀಮ ಅವರ ಮೃತದೇಹ ಶೌಚಾಲಯದಲ್ಲಿ ಪತ್ತೆಯಾಗಿದ್ದು, ದೇಹದಲ್ಲಿ ಅಲ್ಲಲ್ಲಿ ಗಾಯದ ಗುರುತುಗಳಿವೆ ಎಂದು ತಿಳಿದುಬಂದಿದೆ. ಗಾಂಜಾ ವ್ಯಸನಿಯಾಗಿದ್ದ ಉಮರ್ ಫಾರೂಕ್ ಗೆ ಈಕೆ ಮೂರನೇ ಪತ್ನಿ ಎನ್ನಲಾಗುತ್ತಿದೆ. ಈಕೆಗೆ ನಾಲ್ಕು ವರ್ಷದ ಒಂದು ಹೆಣ್ಣು, ಒಂದು ವರ್ಷ ನಾಲ್ಕು ತಿಂಗಳ ಒಂದು ಗಂಡು ಮಗುವಿದೆ. ಈತನ ಮೇಲೆ ಗಾಂಜಾ ಪ್ರಕರಣ, ವರದಕ್ಷಿಣೆ ಕಿರುಕುಳ ಸೇರಿದಂತೆ ಬೆಳ್ತಂಗಡಿ, ವೇಣೂರು, ಚಿಕ್ಕಮಗಳೂರು ಠಾಣೆಗಳಲ್ಲಿ ಏಳು ಪ್ರಕರಣ ದಾಖಲಾಗಿದ್ದು ರೌಡಿ ಶೀಟರ್ ಎಂದು ತಿಳಿದು ಬಂದಿದೆ. ಈತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲಿನಿಂದ ಕೆಲ ದಿನಗಳ ಹಿಂದೆಯಷ್ಟೇ ಜಾಮೀನು ಮೇಲೆ ಹೊರಬಂದಿದ್ದ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

More from the blog

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ..

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಡ್‌ ಲಸಿಕೆ...

ಸರಪಾಡಿ : 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚೇತನ್ ಬಜ ಆಯ್ಕೆ..

ಬಂಟ್ವಾಳ : ಶರಭೇಶ್ವರ ದೇವಸ್ಥಾನ ಸರಪಾಡಿ ಇದರ 34ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ 3ನೇ ಬಾರಿ ಚೇತನ್ ಬಜ ಆಯ್ಕೆಯಾಗಿದ್ದಾರೆ.    

ಸೌಹಾರ್ದ ಬದುಕು ಕಟ್ಟೋಣ : ಡಾ.ಎನ್.ಇಸ್ಮಾಯಿಲ್..

ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್...

Bantwal: ಅಪ್ರಾಪ್ತ ಬಾಲಕ ನೇಣಿಗೆ ಶರಣು:ಕಾರಣ ನಿಗೂಡ

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ...