Monday, July 14, 2025

ಬೆಳ್ತಂಗಡಿ: ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ರಾಜಕೇಸರಿ ಸಂಸ್ಥೆ ಹಾಗೂ ಸುವರ್ಣ ಸಾಂಸ್ಕ್ರತಿಕ ಪ್ರತಿಷ್ಠಾನದ ವತಿಯಿಂದ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಹಾಗೂ ಅನುಗ್ರಹ ಜನಸೇವಾ ಕೇಂದ್ರದ ಸಹಕಾರದಲ್ಲಿ ಆರೋಗ್ಯ ಸೇತು ಆ್ಯಪ್ ಮತ್ತು ಸರ್ಕಾರದ ಕಾರ್ಮಿಕ ಕಾರ್ಡ್ ಮಾಹಿತಿ ಕಾರ್ಯಾಗಾರವನ್ನು ತಾಲೂಕಿನ ಸುವರ್ಣ ಆರ್ಕೇಡ್‌ನ ಸಭಾ ಭವನದಲ್ಲಿ ಇಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಕೋವಿಡ್-19 ಸೋಂಕಿನ ಸುರಕ್ಷತೆಗಾಗಿ ಎಲ್ಲರೂ ಆರೋಗ್ಯ ಸೇತು ಆ್ಯಪ್ ಬಳಸಿಕೊಳ್ಳಬೇಕು. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ರಾಜಕೇಸರಿ ಸಂಸ್ಥೆ ಹಾಗೂ ಸಾಂಸ್ಕ್ರತಿಕ ಪ್ರತಿಷ್ಠಾನ ಮಾಡುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಪತ್ ಸುವರ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿ ಮುಂಡಾಜೆ, ತಾಲೂಕು ಆರೋಗ್ಯ ಕಾರ್ಯಕ್ರಮದ ವ್ಯವಸ್ಥಾಪಕ ಅಜಯ್‌ಕುಮಾರ್, ಅನುಗ್ರಹ ಜನಸೇವಾ ಕೇಂದ್ರದ ಸಲ್ಹತ್, ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ., ರಾಜಕೇಸರಿ ತಾಲೂಕು ಕಾರ್ಯದರ್ಶಿ ಅನಿಲ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುವರ್ಣ ಪ್ರತಿಷ್ಠಾನದ ವತಿಯಿಂದ ಮಾಸ್ಕ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ ಮಾಹಿತಿ ಪಡೆದುಕೊಂಡರು.

More from the blog

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌...

ಬಂಟರ ಸಂಘ ನರಿಕೊಂಬು – ಶಂಭೂರು ಅಧ್ಯಕ್ಷರಾಗಿ ಪ್ರೇಮನಾಥ ಶೆಟ್ಟಿ ಪುನರಾಯ್ಕೆ..

ಬಂಟ್ವಾಳ: ನರಿಕೊಂಬು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ ಅಂತರ ಅವರು ಬಂಟರ ಸಂಘ ನರಿಕೊಂಬು- ಶಂಭೂರು ಗ್ರಾಮ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆ ಆಗಿದ್ದಾರೆ. ಜು. 10 ರಂದು ಕರ್ಬೆಟ್ಟು ಭಾಸ್ಕರ ಶೆಟ್ಟಿ ವಸತಿಗ್ರಹದಲ್ಲಿ...

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ..

ಮಂಗಳೂರು : ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ ಸೇವಾ...

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...