Friday, June 27, 2025

ಲಾರಿಗೆ ಬೆಂಕಿ : ಘಟನೆಯಲ್ಲಿ ಲಕ್ಷಾಂತರ ರೂ ನಷ್ಟ

ಬಂಟ್ವಾಳ: ಕೋಳಿ ಪೀಡ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಬೆಂಕಿ ತಗುಲಿ , ಡಿಕ್ಕಿಯಾಗಿದೆ, ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ರಿಬ್ಬರಿಗೂ ಗಾಯಗಳಾಗಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಈ ಘಟನೆ ಸಂಭವಿಸಿದೆ.


ಕಂದೂರಿನಿಂದ ಪೀಡ್ ಪ್ರಾಡಕ್ಟ್ ಕಂಪೆನೆಯಿಂದ ಮಿನಿ ಲಾರಿ ಪೀಡ್ ತುಂಬಿಸಿಕೊಂಡು ಹೋಗುವ ವೇಳೆ ಮಾರ್ನಬೈಲು ಎಂಬಲ್ಲಿ ಘಟನೆ ಸಂಭವಿಸಿದೆ.
ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ.
ಲಾರಿಗೆ ಬೆಂಕಿ ತಗುಲಿ ಬಳಿಕ ಅಪಘಾತ ಸಂಭವಿಸಿ ದೆಯಾ ಅಥವಾ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಅನಂತರ ಮನೆಯೊಂದರ ಕಾಂಪೌಂಡ್ ಗೆ ಡಿಕ್ಕಿಯಾದ ಬಳಿಕ ಲಾರಿಗೆ ಬೆಂಕಿ ಹಚ್ಚಿಕೊಂಡಿದೆಯಾ ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿಯಬೇಕಾಗಿದೆ.
ಲಾರಿಗೆ ಬೆಂಕಿ ಹಚ್ಚಿಕೊಂಡಿದ್ದನದನ್ನು ಬಂಟ್ವಾಳ ಅಗ್ನಿ ಶಾಮಕ ದಳದವರು ನಂದಿಸಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ.ಅವರು ಸ್ಥಳಕ್ಕೆ ಬೇಟಿ ನೀಡಿ ಮುಂದಿನ ಕ್ರಮಕೈಗೊಂಡಿದ್ದಾರೆ

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಇಂದಿನಿಂದ ಮುಹರ್ರಮ್ ತಿಂಗಳು ಪ್ರಾರಂಭ : ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಘೋಷಣೆ..

ಮಾಣಿ: ಗುರುವಾರ ರಾತ್ರಿ ಚಂದ್ರದರ್ಶನವಾದ ಮಾಹಿತಿ ಪ್ರಬಲವಾಗಿರುವುದರಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ಹಾಗೂ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ಬಳಿ ಖಚಿತವಾದ ಕಾರಣ ಇಂದಿನಿಂದ ಮುಹರ್ರಮ್ ಪ್ರಾರಂಭ ಎಂದು ಖಾಝಿ...

Kempegowda Jayanti : ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ..

ಬಂಟ್ವಾಳ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಶಿಲ್ದಾರ್ ಅರ್ಚನಾ ಭಟ್ ಮಾತನಾಡಿ, ದೂರದೃಷ್ಟಿಯ ಚಿಂತನೆಯ ವ್ಯಕ್ತಿಯಾಗಿದ್ದ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...