Sunday, February 9, 2025

ಬಂಟ್ವಾಳ ತಾಲೂಕು ಭಜನಾ ಪರಿಷತ್ ಸಭೆ

ಬಂಟ್ವಾಳ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಬಂಟ್ವಾಳ ತಾಲೂಕು ಭಜನಾ ಪರಿಷತ್ ಮತ್ತು ತಾಲೂಕಿನ ಎಲ್ಲ ಭಜನಾ ಮಂಡಳಿಗಳ ಸಂಯುಕ್ತವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾರ್ಗದರ್ಶನದೊಂದಿಗೆ ತಾಲೂಕಿನ ಭಜನಾ ಮಂಡಳಿಗಳ ಸಮಾಲೋಚನಾ ಸಭೆ ಮತ್ತು
ಬಂಟ್ವಾಳ ತಾಲೂಕು ಭಜನಾ ಪರಿಷತ್ ಸಭೆಯು ಬಿ.ಸಿ‌.ರೋಡ್ ನಲ್ಲಿ ಬುಧವಾರ ನಡೆಯಿತು.

ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಸಭೆಯನ್ನು ಉದ್ಘಾಟಿಸಿ‌ ಮಾತನಾಡಿ, ಶ್ರದ್ಧೆ, ಭಕ್ತಿಯಿಂದ ಭಜನೆ ಮಾಡಿದಾಗ ನಮ್ಮ ಮನಸಿನಲ್ಲಿ ಪರಿವರ್ತನೆಯಾಗಳು ಸಾಧ್ಯ ಎಂದರು.
ಮುಂದಿನ ದಿನಗಳಲ್ಲಿ ಡಾ.ವಿರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಧರ್ಮಸ್ಥಳ ದಲ್ಲಿ ಭಜನಾ ಸಭೆ ನಡೆಯಲಿದೆ ಎಂದರು.
ಭಜನಾ ಕರ್ತವ್ಯಗಳು, ಕ್ರಮ ಹಾಗೂ ಸಂಸ್ಕೃತಿ -ಸಂಸ್ಕಾರದ ಬಗ್ಗೆ ಮಾಹಿತಿ ನೀಡಿದರು.
ಬಂಟ್ವಾಳ ತಾಲೂಕು ಭಜನಾ ಪರಿಷತ್ನ ಅಧ್ಯಕ್ಷ ಶಶಿಧರ್ ಅಧ್ಯಕ್ಷತೆ ವಹಿಸಿದ್ದರು.
ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸಂಪನ್ಮೂಲಗಳ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಧರ್ಮಸ್ಥಳ ಭಜನಾ ಪರಿಷತ್ ನ ಅಧ್ಯಕ್ಷ ಬಾಲಕೃಷ್ಣ ಪಂಜ, ಸದಸ್ಯ ಶ್ರೀನಿವಾಸ್ ರಾವ್, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ಚಂದ್ರಶೇಖರ್ ಕೆ., ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಅಧ್ಯಕ್ಷ ಪ್ರಕಾಶ್ ಕಾರಂತ, ಸದಸ್ಯ ಆನಂದ, ರವೀಂದ್ರ ಕಂಬಳಿ, ಹಿರಿಯ ವೈದ್ಯ ಬಿ.ವಿ.ವಸಂತ ಬಾಳಿಗ, ಕೇಂದ್ರ ಒಕ್ಕೂಟ ಸಮಿತಿಯ ಬಂಟ್ವಾಳ ತಾಕೂಕು ಅಧ್ಯಕ್ಷ ಸದಾನಂದ ನಾವೂರು, ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್ ಉಪಸ್ಥಿತರಿದ್ದರು.
ಬಂಟ್ವಾಳ ವಲಯದ ಯೋಜನಾಧಿಕಾರಿ ಜಯಾನಂದ ಪಿ. ಸ್ವಾಗತಿಸಿ, ಸಿದ್ಧಕಟ್ಟೆ ವಲಯದ ಮೇಲ್ವಿಚಾರಕಿ ಹರಿಣಾಕ್ಷಿ ವಂದಿಸಿದರು. ಮೇಲ್ವಿಚಾರಕ ಶಶಿಧರ್ ನಿರೂಪಿಸಿದರು.



More from the blog

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...