Thursday, June 26, 2025

ಭಜನೆಯು ಸಂಸ್ಕಾರಕ್ಕೆ ಪ್ರೇರಕ: ಸೂರ್ಯ ಭಟ್ ಕಶೆಕೋಡಿ

ಬಂಟ್ವಾಳ: ಭಜನೆಯಿಂದ ನಮ್ಮ ಮಕ್ಕಳಿಗೆ ಸಂಸ್ಕಾರ ಕಲಿಯಲು ಪ್ರೇರಣೆ ಸಿಗುತ್ತದೆ ಅದರಿಂದ ಬದುಕಿಗೆ ಬೇಕಾದ ಮನೋಧೈರ್ಯ ಬೆಳೆಯುತ್ತದೆ ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರು ತಿಳಿಸಿದರು
ಅವರು ಬರಿಮಾರು ಶ್ರೀ ವಿನಾಯಕ ಶ್ರೀ ದೇವಿ ಭಜನಾ ಮಂದಿರದಲ್ಲಿ ಭಜನಾ ಮತ್ತು ಸಂಸ್ಕಾರ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಮನುಷ್ಯ ಮೂಲದಲ್ಲೇ ಸಂಸ್ಕಾರ ಪಡೆಯಬೇಕು ಇಂದಿನ ಸಮಾಜದಲ್ಲಿ ಸಂಸ್ಕಾರದ ಕೊರತೆಯಿಂದ ವಿದ್ಯಾವಂತರೆನಿಸಿದ ಜನರೇ ಸಮಾಜಘಾತುಕ ಕೆಲಸದಲ್ಲಿ ತೊಡಗಿದ್ದಾರೆ ಅದಕ್ಕಾಗಿ ಇಂತಹ ಸಂಸ್ಕಾರ ತರಬೇತಿ ಶಿಬಿರಗಳು ಅಗತ್ಯ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಮಂದಿರದ ಅಧ್ಯಕ್ಷರಾದ  ಜಯಂತ ಪಂಜುರ್ಲಿ ಗುಡ್ಡೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಮಹಮ್ಮಾಯಿ ಸೇವಾ ಸಮಿತಿಯ ಅಧ್ಯಕ್ಷ ಸುಧಾಕರ ಸಪಲ್ಯ, ಹಿರಿಯ ಭಜನಾಕಾರ ಗೋಪಾಲ್ ನಾಯಕ್ ಉಪಸ್ಥಿತರಿದ್ದರು.
ಭಜನಾ ತರಬೇತುದಾರ ಅಶ್ವತ್ಥ್ ಬರಿಮಾರು ಪ್ರಸ್ತಾವಿಸಿ ಭಜನಾ ತರಬೇತಿಯ ಉದ್ದೇಶಗಳನ್ನು ತಿಳಿಸಿದರೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಗೀತಾ ಶಿವಾನಂದ ನಿರೂಪಿಸಿದರು ಗುರುರಾಜ್ ಆಳ್ವ, ಹರೀಶ್ ಪಂಜುರ್ಲಿ ಗುಡ್ಡೆ , ಶಿವಾನಂದ ಕರ್ತಕೋಡಿ ಸಹಕರಿಸಿದರು.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...