Thursday, February 13, 2025

ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆ

ನರಿಕೊಂಬು ಗ್ರಾಮದ ಪಾಣೆಮಂಗಳೂರಿನಲ್ಲಿರುವ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಈಗಾಗಲೇ ಆರಂಭಗೊಂಡಿದ್ದು, ತನ್ನಿಮಿತ್ತವಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆ ಮಂಗಳವಾರ ನಡೆಯಿತು.

ನರಿಕೊಂಬು ದೊಂಪದಬಳಿಯ ನಾಲ್ಕೈತ್ತಾಯ ದೈವಸ್ಥಾನದಿಂದ ಹೊರಟ ಮೆರವಣಿಗೆ ನರಿಕೊಂಬು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಿಂದ ಕುರ್ಚಿಪಲ್ಲ, ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ, ಪಾಣೆಮಂಗಳೂರು ಶ್ರೀ ವೀರವಿಠಲ ದೇವಸ್ಥಾನದಿಂದ ಶ್ರೀ ಭಯಂಕೇಶ್ವರ ಸದಾಶಿವ ಕ್ಷೇತ್ರಕ್ಕೆ ತಲುಪಿತು. ಹನುಮಂತನ ಟ್ಯಾಬ್ಲೊ ಸಹಿತ ವಿವಿಧ ಟ್ಯಾಬ್ಲೊಗಳು, ಚೆಂಡೆ ಸಹಿತ ಆಕರ್ಷಕ ಪ್ರದರ್ಶನಗಳೊಂದಿಗೆ ಸ್ಥಳೀಯ ಗಣ್ಯರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೀಪಪ್ರಜ್ವಲನಗೈದು, ಕಾರ್ಯಕ್ರಮ ನಿರ್ವಿಘ್ನವಾಗಿ ನೆರವೇರಲಿ ಎಂದು ಹಾರೈಸಿದರು. ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ ಎರಕಳ, ಬ್ರಹ್ಮಕಲಶ ಮಹೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಾರ್ಯದರ್ಶಿ ಪದ್ಮನಾಭ ಮಯ್ಯ ಏಲಬೆ, ಸಂಚಾಲಕರಾದ ಪ್ರಕಾಶ್ ಕಾರಂತ ನರಿಕೊಂಬು, ಕೋಶಾಧಿಕಾರಿ ಕೆ.ಶಂಕರನಾರಾಯಣ ರಾವ್, ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ರಘು ಸಫಲ್ಯ, ಕಾರ್ಯದರ್ಶಿ ಲೋಕೇಶ್ ಕೆ. ನರಹರಿನಗರ, ಸದಸ್ಯರಾದ ಮೋಹನ ಆಚಾರ್ಯ, ಚಂದ್ರಾವತಿ ರತ್ನಾಕರ ನಾಯ್ಕ್, ಕೃಷ್ಣಪ್ಪ ಗಾಣಿಗ, ಸಂಜೀವ ಸಪಲ್ಯ, ಪ್ರಮುಖರಾದ ನಾರಾಯಣ ಸೋಮಯಾಜಿ, ಪುರುಷೋತ್ತಮ ಸಾಲಿಯಾನ್, ಸಂತೋಷ್ ಕುಮಾರ್, ಪ್ರೇಮನಾಥ ಶೆಟ್ಟಿ ಅಂತರ, ಶ್ರೀಷ ರಾಯಸ, ವಸಂತ ಪಿ, ಭುವನೇಶ್, ಪ್ರಕಾಶ್ ಕೋಡಿಮಜಲು, ಪ್ರವೀಣ್ ಕುಮಾರ್, ಪುರುಷೋತ್ತಮ ಬಂಗೇರ, ಕಿಶೋರ್ ಶೆಟ್ಟಿ, ಮೋಹನದಾಸ ಕೊಟ್ಟಾರಿ, ಕಮಲಾಕ್ಷ ಶಂಭೂರು ಸಹಿತ ಪ್ರಮುಖರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...