Thursday, June 26, 2025

ಬಾಲಕಿ ಹೆರಿಗೆ ಪ್ರಕರಣ: ಮನೆಗೆ ತಾಲೂಕು ಮಕ್ಕಳ ಸಂರಕ್ಷಣಾಧಿಕಾರಿ ಭೇಟಿ

ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿ ಅತ್ಯಾಚಾರ ಎಸಗಿ ಬಾಲಕಿ ಹೆರಿಗೆಯ ಬಳಿಕ ಪ್ರಕರಣ ಬೆಳಕಿಗೆ ಬಂದ ಘಟನೆಗೆ ಸಂಬಂಧಿಸಿದಂತೆ ತಾಲೂಕು ಮಕ್ಕಳ ರಕ್ಷಣಾಧಿಕಾರಿ ಸಿ.ಡಿ.ಪಿ.ಒ.ಗಾಯತ್ರಿ ಕಂಬಳಿ ನೇತ್ರತ್ವದ ತಂಡ ಬಾಲಕಿಯ ಮನೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿದೆ.

ಘಟನೆಯ ವಿವರ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶದಲ್ಲಿ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಂತ್ರಸ್ತ ಬಾಲಕಿ ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿದ್ದು ಆಕೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ ಬಳಿಕ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ.

ಸಂತ್ರಸ್ತೆ ಬಾಲಕಿಗೆ ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂ ನಲ್ಲಿ ಪರಿಚಯವಾಗಿದ್ದು ಬಳಿಕ ಆತ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿ ಆ ಬಳಿಕ ನಾಪತ್ತೆಯಾಗಿದ್ದಾನೆ.

ಇದೀಗ ಆರೋಪಿ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

*ಮಕ್ಕಳ ರಕ್ಷಣಾಧಿಕಾರಿ ತಂಡ ಮನೆಗೆ ಬೇಟಿ*

ಘಟನೆಯ ಬಗ್ಗೆ ಮಾಹಿತಿ ತಿಳಿದ ಮಕ್ಕಳ ರಕ್ಷಣಾ ಅಧಿಕಾರಿ ಹಾಗೂ ಬಂಟ್ವಾಳ ಸಿ.ಡಿ.ಪಿ‌.ಒ.ಗಾಯತ್ರಿ ಕಂಬಳಿ, ಸಂರಕ್ಷಣಾಧಿಕಾರಿ ಭಾರತಿಕುಂದರ್, ರಕ್ಷಣಾ ಘಟಕ ದ ಅಧಿಕಾರಿ ಕುಮಾರ್ ಶೆಟ್ಟಿಗಾರ್, ಚೈಲ್ಡ್ ಲೈನ್ ಘಟಕದ ಸಮಾಲೋಚಕಿ ಸಂಪತ್ ಮತ್ತಿತರು ಬಾಲಕಿ ಹೆರಿಗೆಯಾದ ಆಸ್ಪತ್ರೆಗೆ ಬೇಟಿ ನೀಡಿ ಮಾಹಿತಿ ಪಡೆದು ಕೊಂಡರು. ಜೊತೆಗೆ ಸ್ಕಾನಿಂಗ್ ವಿಭಾಗದ ಸಿಬ್ಬಂದಿ ಗಳ ಜೊತೆಯೂ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಅದಾರದ ಮೇಲೆ ಬಾಲಕಿಯ ಮನೆಗೆ ಬೇಟಿ ನೀಡಿ ತಾಯಿ ಮಗುವಿನ ಆರೋಗ್ಯ ರಕ್ಷಣೆಯ ಜವಾಬ್ದಾರಿ ಹಾಗೂ ಮುಂದಿನ ಕ್ರಮದ ಬಗ್ಗೆ ಕ್ರಮಕೈಗೊಳ್ಳಬೇಕಾದ ಮಾಹಿತಿ ನೀಡಿದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...