Monday, January 26, 2026

ಕುಕ್ಕೆ ಸುಬ್ರಹ್ಮಣ್ಯದ ಬ್ರಹ್ಮ ರಥಕ್ಕೆ ಕೈಕಂಬದಲ್ಲಿ ಅದ್ದೂರಿ ಸ್ವಾಗತ: ಮುಸ್ಲಿಂ ಬಾಂಧವರಿಂದ ಜ್ಯೂಸ್, ಲಡ್ಡು

ಬಂಟ್ವಾಳ: ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಉದ್ಯಮಿ ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್ ಶೆಟ್ಟಿ ಕಡಬ ಕೊಡುಗೆಯಾಗಿ ನೀಡಲಿರುವ ಬ್ರಹ್ಮರಥ ಮಂಗಳವಾರ ಕದ್ರಿಯಿಂದ ಆಗಮಿಸಿದ ಬ್ರಹ್ಮ ರಥವನ್ನು ಬಿ.ಸಿ.ರೋಡಿನ ಕೈಕಂಬದಲ್ಲಿ ಅದ್ದೂರಿಯಿಂದ ಸ್ವಾಗತಿಸಲಾಯಿತು.


ಕೈಕಂಬದ ಮುಸ್ಲಿಂ ಬಾಂಧವರು ರಥವನ್ನು ಸ್ವಾಗತಿಸಿದಲ್ಲದೆ, ರ್ಯಾಲಿಯಲ್ಲಿ ಬಂದ ಎಲ್ಲ ಹಿಂದೂ ಬಾಂಧವರಿಗೆ ಜ್ಯೂಸ್ ಹಾಗೂ ಲಡ್ಡು ವಿತರಿಸುವ ಮೂಲಕ ಸೌಹಾರ್ದ ಮೆರೆದರು.
ಬಳಿಕ ಬಿ.ಸಿ ರೋಡ್ ನಲ್ಲಿ ಬಂಟ್ವಾಳದ ಭಕ್ತಾದಿಗಳ ಪರವಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...