ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ಗೆ ಕೊರೊನೊ ಸೋಂಕು ತಗುಲಿದ್ದು, ಈ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಅವರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಗ್ ಬಿ ಹಾಗೂ ಅವರ ಮಗ ಅಭಿಷೇಕ್ ಬಚ್ಚನ್ ಗೆ ಸೋಂಕು ತಗುಲಿದ ಬೆನ್ನಲ್ಲೇ ಇದೀಗ ಅಭಿಷೇಕ್ ಬಚ್ಚನ್ ಪತ್ನಿ ಐಶ್ವರ್ಯಾ ರೈ ಹಾಗೂ ಪುತ್ರಿ ಆರಾಧ್ಯಗೂ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ.
ಹೀಗಾಗಿ ಬಿಗ್ ಬಿ ಪತ್ನಿ ಜಯಾ ಬಚ್ಚನ್ ಹೊರತುಪಡಿಸಿ ಬಚ್ಚನ್ ಕುಟುಂಬದ ಎಲ್ಲರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅಮಿತಾಬ್ ಬಚ್ಚನ್ ಪುತ್ರಿ ಶ್ವೇತಾ ಬಚ್ಚನ್ ನಂದಾ, ಅವರ ಪುತ್ರಿಯರಾದ ಆಗಸ್ತ್ಯ ಹಾಗೂ ನವ್ಯಾ ನವೇಲಿ ಅವರಿಗೆ ಕೊರೊನಾ ನೆಗೆಟಿವ್ ಎಂದು ತಿಳಿದುಬಂದಿದೆ.
ಬಿಗ್ ಬಿ ಪತ್ನಿ ಜಯಾ ಬಚ್ಚನ್ ಹೊರತುಪಡಿಸಿ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಹಾಗೂ ಮೊಮ್ಮಗಳು ಆರಾಧ್ಯಗೆ ಕೊರೊನಾ ಸೋಂಕು ತಗುಲಿರುವುದರಿಂದ ಅವರು ವಾಸವಿದ್ದ ಜಲ್ಸಾ ಬಂಗಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
