ಬಂಟ್ವಾಳ: ಕೆಲಿಂಜ ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶಕುಂತಲಾ ಕೆ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಕೆಲಿಂಜ ಸರಕಾರಿ ಶಾಲೆಯಲ್ಲಿ ನಡೆಯಿತು.
ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡಿದ ಮಾಜಿ.ಜಿ.ಪಂ.ಸದಸ್ಯೆ ಮಂಜುಳಾ ಮಾವೆ ಮಾತನಾಡಿ ಒಟ್ಟು 39 ವರ್ಷ ಗಳ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಶಕುಂತಲಾ ಅವರಿಗೆ ವಿಶೇಷ ಕಾಳಜಿಯ ಸೇವೆಯಿಂದ ಎಷ್ಟೋ ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಮಾಡಿರುವುದು ಸಾಧನೆಯ ಮೆಟ್ಟಿಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ.ತಾ.ಪಂ.ಸದಸ್ಯ ಮಾದವಮಾವೆ, ಮಾಜಿ ತಾ.ಪಂ.ಸದಸ್ಯ ಗೀತಾಚಂದ್ರಶೇಖರ್, ಗ್ರಾಮ ಪಂ.ಸದಸ್ಯ ಜಯಪ್ರಸಾದ್, ಪ್ರಾ. ಶಾಲಾ.ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಶಿವಪ್ರಸಾದ್, ತಾಲೂಕು ಅಧ್ಯಕ್ಷ ಜಯರಾಮ್, ತಾಲೂಕು ಉಪಾಧ್ಯಕ್ಷ ನಾರಾಯಣ ಪೂಜಾರಿ, ರಾಜ್ಯ ಸರಕಾರಿ ನೌಕರರ ಬಂಟ್ವಾಳ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು, ಪ್ರಾ.ಶಾ.ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ, ಎಸ್.ಡಿ.ಎಂ.ಸಿ.ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಕ ತಿಮ್ಮಪ್ಪ ನಾಯ್ಕ್ ಸ್ವಾಗತಿಸಿ, ಶಿಕ್ಷಕಿ ಮಂಜುಳಾ ವಂದಿಸಿದರು.

