Thursday, June 26, 2025

ನೀರಿನ ಬಿಲ್- ಮನೆ ತೆರಿಗೆ-ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಸುದೀಪ್ ಕುಮಾರ್ ಶೆಟ್ಟಿ ಆಗ್ರಹ

ಬಂಟ್ವಾಳ: ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಪ್ರದೇಶದ ಸುಮಾರು 120 ಮನೆಗಳ ನಿವಾಸಿಗಳ ಬದುಕು ಸೀಲ್ ಡೌನ್‍ನಿಂದಾಗಿ ಸಂಕಷ್ಟಕ್ಕೀಡಾಗಿದ್ದು ಈ ಹಿನ್ನಲೆಯಲ್ಲಿ ಇಲ್ಲಿಯ ನಿವಾಸಿಗಳ ಮನೆ ತೆರಿಗೆ, ವಿದ್ಯುತ್ ಬಿಲ್, ನೀರಿನ ಬಿಲ್ಲನ್ನು ಮನ್ನಾ ಮಾಡುವಂತೆ ಪಾನೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ.


ಈ ಪ್ರದೇಶದಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಹಿನ್ನಲೆಯಲ್ಲಿ ಈ ಪ್ರದೇಶವನ್ನು ಸೀಲ್ ಡೌನ್ ಪ್ರದೇಶವೆಂದು ಘೋಷಿಸಲಾಗಿದ್ದು ಇಲ್ಲಿಯ ಸುಮಾರು 120 ಮನೆಗಳ ಜನರಿಗೆ ಯಾವುದೇ ಮೂಲಭೂತ ಸೌಲಭ್ಯ ದೊರೆತಿಲ್ಲ. ಇದರಿಂದಾಗಿ ಇಲ್ಲಿಯ ಜನರಿಗೆ ದಿನ ನಿತ್ಯದ ಬದುಕು ನಿರ್ವಹಣೆ ಕಷ್ಟವಾಗಿದ್ದು ಈ ಸಂದರ್ಭದಲ್ಲಿ ಇಲ್ಲಿನ ನಿವಾಸಿಗಳ ನೀರಿನ ಬಿಲ್/ ಮನೆ ತೆರಿಗೆ/ವಿದ್ಯುತ್ ಬಿಲ್ ಮನ್ನಾ ಮಾಡುವ ಮುಖಾಂತರ ಅವರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಕಾರ್ಯನಿರ್ವಹಣಾಧಿಕಾರಿ ಬಂಟ್ವಾಳ ತಾಲೂಕು ಇವರಿಗೆ ಮನವಿ ಸಲ್ಲಿಸುವ ಮೂಲಕ ಸುದೀಪ್ ಕುಮಾರ್ ಶೆಟ್ಟಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ, ತಾಲೂಕು ಪಂಚಾಯತ್ ಸದಸ್ಯರಾದ ಗಾಯತ್ರಿ ರವೀಂದ್ರ ಸಪಲ್ಯ, ಬಂಟ್ವಾಳ ವಿಧಾನ ಸಭೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ನರಿಕೊಂಬು ವಲಯ ಅಧ್ಯಕ್ಷರಾದ ಮಾದವ ಕರ್ಬೆಟ್ಟು, ಆಲ್ಬರ್ಟ್ ಮಿನೇಜಸ್, ಪಂಚಾಯತ್ ಸದಸ್ಯರಾದ ರವೀಂದ್ರ ಸಪಲ್ಯ ಕೃಷ್ಣಪ್ಪ ನಾಟಿ, ಅರುಣ್ ಶೆಟ್ಟಿ. ಉಪಸ್ಥಿತರಿದ್ದರು.

More from the blog

ವಿಟ್ಲ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಟ್ಲ ವರ್ತಕರ ಸಂಘದಿಂದ ತಯಾರಿಸಲಾದ ಪ್ಲಾಸ್ಟಿಕ್ ನಿಷೇಧದ ಸ್ಟಿಕ್ಕರ್ ನ್ನು ವರ್ತಕರ ಸಂಘದ ಸಹಕಾರದೊಂದಿಗೆ ವಿಟ್ಲ ಪೇಟೆಯ...

Installation Ceremony : ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ..

ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ...

ಸತತ 3ನೇ ಬಾರಿಗೆ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕೀರ್ತಿ ಆಯ್ಕೆ..

ವಿಟ್ಲ : ವಿಟ್ಲ ಪಡೂರು ಗ್ರಾಮದ ಕುಕ್ಕಿಲ ಮನೆ ಶ್ರೀಮತಿ ವನಿತಾ ಲಕ್ಷ್ಮಣ ಗೌಡ ದಂಪತಿಯ ಪುತ್ರಿ ಕೀರ್ತಿ ಇವರು ಸತತ 3ನೇ ಬಾರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಮಾದರಿ ಹಿರಿಯ ಪ್ರಾಥಮಿಕ...

Crop Insurance : ಅಡಿಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಿಮಿಯಂ ಪ್ರಾರಂಭ..

ಬಂಟ್ವಾಳ : ಕರಾವಳಿಯ ದಕ್ಸಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯಲ್ಲಿ ತೋಟಾಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ...