ವಿಟ್ಲ: ವಿಟ್ಲ ಬಿಲ್ಲವ ಸಂಘ ಮತ್ತು ಮಹಿಳಾ ಘಟಕದ ವತಿಯಿಂದ ಜೂ. ೧೬ ರಂದು ಇಲ್ಲಿನ ಶಿವಗಿರಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ವಾರ್ಷಿಕ ಶ್ರೀಸತ್ಯನಾರಾಯಣ ಪೂಜೆ, ವಿದ್ಯಾರ್ಥಿ ವೇತನ ವಿತರಣೆ, ಸನ್ಮಾನ ಕಾರ್‍ಯಕ್ರಮ ನಡೆಯಲಿದೆ.
ಧಾರ್‍ಮಿಕ ಸಭೆಯನ್ನು ಕಾರ್ಕಳ ಹೊಸ್ಮಾರು ಬಲ್ಯೊಟ್ಟು ಶ್ರೀಗುರುಕೃಪಾ ಸೇವಾಶ್ರಮದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ವಿಟ್ಲ ಬಿಲ್ಲವ ಸಂಘದ ಅಧ್ಯಕ್ಷ ಜಗದೀಶ ಪಾಣೆಮಜಲು ಅಧ್ಯಕ್ಷತೆ ವಹಿಸಲಿದ್ದು, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ರೋಟರಿ ಜಿಲ್ಲಾ ಗವರ್ನರ್ ರೋಹಿನಾಥ ಪಾದೆ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್‍ಯದರ್ಶಿ ಜಯಪ್ರಕಾಶ್ ಎ., ಸರಕಾರಿ ಶಾಲೆ ಉಳಿಸಿ-ಬೆಳೆಸಿ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್, ಡಾ. ಕಿಶೋರ್ ಬಂಗೇರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ ಸಿ.ಎಚ್, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಲತಾ ಸೋಮಶೇಖರ್ ಭಾಗವಹಿಸಲಿದ್ದಾರೆ.


