ಬಂಟ್ವಾಳ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.)ಮುಲ್ಕಿ ಇದರ ಬೆಳ್ಳಿ ಹಬ್ಬ ಸಮಾರಂಭ ಕಾರ್ಯಕ್ರಮ ಮಾ.10 ರಂದು ಆದಿತ್ಯವಾರ ಭವಾನಿ ಶಂಕರ ಕಂಪೌಂಡ್ ಮುಲ್ಕಿಯಲ್ಲಿ ನಡೆಯಲಿದೆ ಎಂದು ಬಿಲ್ಲವ ಮಹಾಮಂಡಲದ ವಕ್ತಾರ ಬೇಬಿ ಕುಂದರ್ ತಿಳಿಸಿದರು.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ದೇಶ ವಿದೇಶಗಳಿಂದ ಬಿಲ್ಲವ ಸಮಾಜದ ಬಾಂಧವರು ಭಾಹವಹಿಸಲಿದ್ದಾರೆ.
ಮುಲ್ಕಿಯಲ್ಲಿ ನಡೆಯುವ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಸಮಾಜದವರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಘಟಕಗಳಿಗೆ ಬೇಟಿ ಮಾಡಿ ಸಭೆ ಗಳನ್ನು ನಡೆಸಲಾಗಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಮಾಜದ ಗಣ್ಯರನ್ನು ಬಿರುದು ನೀಡಿ ಗೌರವಿಸಲಾಗುತ್ತದೆ.
ಬೆಳ್ಳಿ ಹಬ್ಬದ ಸಮಾರಂಭವನ್ನು ಮಾಜಿ ಕೇಂ ಸಚಿವ ಬಿ.ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ.ಇವರ ಜೊತೆ ಸಮಾಜದ ಅನೇಕ ಗಣ್ಯರು ಜೊತೆಯಾಗಲಿದ್ದಾರೆ ಎಂದು ಅವರು ತಿಳಿಸಿದರು.
ಕರ್ನಾಟಕದಲ್ಲಿ ಬಿಲ್ಲವ ನಾರಾಯಣ ಗುರು ನಿಗಮ ಮಂಡಲವನ್ನು ಸ್ಥಾಪನೆ ಮಾಡುವಂತೆ ಸಭೆಯಲ್ಲಿ ಒತ್ತಾಯ ಮಾಡಲಿದ್ದೇವೆ.ಬಿಲ್ಲವ ಸಂಘದ ವತಿಯಿಂದ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜು ಸ್ಥಾಪನೆಗೆ ಕಾರ್ಯಕ್ರಮ ಸಾಕ್ಷಿಯಾಗಲಿದೆ . ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕ.ಮತ್ತು ಉಡುಪಿ ಜಿಲ್ಲೆಯ ಸಂಸದ ಸ್ಥಾನಕ್ಕೆ
ಬಿಲ್ಲವ ಸಮುದಾಯಕ್ಕೆ ಅವಕಾಶ ನೀಡುವಂತೆ ಒತ್ತಾಯ ಮಾಡಲಿದ್ದೇವೆ ಎಂದು ತಿಳಿಸಿದರು.
ಯುವವಾಹಿನಿ ತಾಲೂಕು ಅಧ್ಯಕ್ಷ ಹರೀಶ್ ಕೋಟ್ಯಾನ್, ಬಿಲ್ಲವ ಸಂಘದ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಶೈಲಜಾ ರಾಜೇಶ್,ಸಿದ್ದಕಟ್ಟೆ ಪ್ರತಿನಿಧಿ ದಾಮೋದರ ಪೂಜಾರಿ ದೋಟ, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಗಣೇಶ್ ಪೂಂಜರಕೋಡಿ, ಬೆಳ್ಳಿಹಬ್ಬ ಕಾರ್ಯಕ್ರಮದ ಜಿಲ್ಲಾ ಸಂಚಾಲಕ ಜಗದೀಶ್ ಕೊಯಿಲ ಉಪಸ್ಥಿತರಿದ್ದರು.