Tuesday, January 27, 2026

ಬಡವರಿಗೆ ಅಕ್ಕಿ ನೀಡಿ ಹುಟ್ಟು ಹಬ್ಬ ಆಚರಣೆ

ಬಂಟ್ವಾಳ: ಕಳ್ಳಿಗೆ ಗ್ರಾಮದ ಬೆಂಜನಪದವು ನಿವಾಸಿ ರಮಾನಂದ ಶೆಟ್ಟಿ ಹಾಗೂ ವಿಜಯಲಕ್ಷ್ಮೀ ದಂಪತಿಯ ಪುತ್ರಿ ಅನಿಶಾ ಶೆಟ್ಟಿ ತನ್ನ ಹುಟ್ಟುಹಬ್ಬವನ್ನು ಬಡವರಿಗೆ ಅಕ್ಕಿಯನ್ನು ದಾನವಾಗಿ ನೀಡುವ ಮೂಲಕ ಬಹಳ ಅರ್ಥಪೂರ್ಣವಾಗಿ ಆಚರಿಸಿಕೊಂಡರು.

ಪ್ರಥಮವಾಗಿ ಭಾರತಮಾತೆಗೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು ಪ್ರಾರ್ಥಿಸಲಾಯಿತು. ಬಳಿಕ 60 ಮಂದಿ ಬಡವರಿಗೆ ತಲಾ 10 ಕಿ.ಗ್ರಾಂ. ಅಕ್ಕಿ 2 ತೆಂಗಿನಕಾಯಿ ನೀಡುವ ಮೂಲಕ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಧನ್ಯವಾದಗಳು. ನಿಮ್ಮ ಈ ಸಮಾಜಸೇವೆ ಎಲ್ಲರಿಗೂ ಮಾದರಿಯಾಗಲಿ ಎಂದು ಕಳ್ಳಿಗೆ ಗ್ರಾಮಸ್ಥರು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...