Monday, January 26, 2026

ಪಡಿಬಾಗಿಲು: ಸಾಮೂಹಿಕ ಹುಟ್ಟು ಹಬ್ಬ ಆಚರಣೆ

ವಿಟ್ಲ: ಪಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ, ಎಲ್‌ಕೆಜಿ- ಯುಕೆಜಿ ಮಕ್ಕಳ ಸಾಮೂಹಿಕ ಹುಟ್ಟು ಹಬ್ಬ, ೮ ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಣೆ ಮತ್ತು ಶಾಲಾ ಶಿಕ್ಷಕ ವೃಂದದಿಂಧ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ ಪಂ ಸದಸ್ಯೆ ಜಯಶ್ರೀ ಕೋಡಂದೂರು, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತ, ಉಪಾಧ್ಯಕ್ಷೆ ರೇಖಾ, ವಿದಾಗಿರಿ ಶಿಕ್ಷಣ ಕೇಂದ್ರದ ಅಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ, ಗೌರವಾಧ್ಯಕ್ಷ ಲಿಂಗಪ್ಪ ಗೌಡ, ಉದ್ಯಮಿ ರಾಧಾಕೃಷ್ಣ ಚೆಲ್ಲಡ್ಕ, ಸ್ಯಾಕ್ಸೋಫೋನ್ ವಾದಕ ಡಾ. ಪಿ.ಕೆ ದಾಮೋದರ, ಗ್ರಾಮ ಪಂಚಾಯಿತಿ ಸದಸ್ಯೆ ದಿವ್ಯಾ ಶಾಲಾಭಿವೃದ್ಧಿ ಸಮಿತಿ ಸದಸ್ಯ ನರಸಿಂಹ ಬಲ್ಲಾಳ್ ಭಾಗವಹಿಸಿದ್ದರು.
ಮುಖ್ಯ ಶಿಕ್ಷಕಿ ಶಶಿಕಲಾ ಪ್ರಸ್ತಾವಿಸಿ ಸ್ವಾಗತಿಸಿದರು. ಸಹಶಿಕ್ಷಕಿ ಮಲ್ಲಿಕಾ ಕೆ ಎಸ್ ವಂದಿಸಿದರು. ಪುಷ್ಪಾವತಿ ಎಂ ನಿರೂಪಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...