Tuesday, July 15, 2025

ನೇತ್ರಾವತಿ ನದಿ ತೀರ ಪ್ರದೇಶದ ಕಾವಳ ಮೂಡೂರು , ಬಡಗ ಕಜೆಕ್ಕಾರು ಪ್ರದೆಶದಲ್ಲಿ ಭಾರೀ ಬಿರುಗಾಳಿ: ಅಪಾರ ನಷ್ಟ

ಮಂಗಳೂರು:  ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಶನಿವಾರ ಸುರಿದ ಗಾಳಿ ಮಳೆಗೆ ಮೂರು ಗ್ರಾಮಗಳ ೮೬ ಮನೆಗಳಿಗೆ ಹಾನಿಯಾಗಿದ್ದು, ನೂರಾರು ಅಡಿಕೆ ಮರಗಳು ಧರೆಗುರುಳಿವೆ. ಮುಖ್ಯವಾಗಿ ಬಡಗಕಜೆಕಾರು, ಉಳಿ, ಕಾವಳಮೂಡೂರು ಗ್ರಾಮದಲ್ಲಿ ಹೆಚ್ಚಿನ ಪ್ರಮಾಣದ ನಷ್ಟ ಉಂಟಾಗಿದೆ.

 

ಉಳಿ ಗ್ರಾಮದ ಗುಂಡಿದೊಟ್ಟು ನಿವಾಸಿ ಲಲಿತಾ ಪೂಜಾರಿ ಅವರ ಮನೆಯ ಮೇಲ್ಛಾವಣಿಯ ಸಿಮೆಂಟ್ ಶೀಟುಗಳು ಗಾಳಿಗೆ ಹಾರಿಹೋಗಿದೆ. ಇದೇ ಪ್ರವೇಶದ ರುಕ್ಮಿನಿ ಗಂಗಯ್ಯ ನಾಯ್ಕ ಅವರ ಮನೆಯ ಮುಂಭಾಗದ ಮೇಲ್ಛಾವಣಿಯ ಶೀಟುಗಳು ಗಾಳಿಗೆ ಹಾರಿವೆ. ಕಕ್ಯ ಮನೆ ಶೇಖರ ಪೂಜಾರಿ ಅವರ ಮನೆಯ ಹಿಂಭಾಗದ ಶೀಟುಗಳು ಗಾಳಿಗೆ ಹಾರಿವೆ.ಉಳಿ ಗ್ರಾಮದ ಶಿವರಾಮ ದೇವಾಡಿಗ, ಗುಡ್ಡೆಮೇಲು ನಿವಾಸಿ ಸೆಫಿಯ ಹಾಗೂ ಕಕ್ಯಪದವು ನಿವಾಸಿ ಅಮೀನಾ ಅವರ ಮನೆಗೂ ಭಾಗಶಃ ಹಾನಿಯಾಗಿದೆ.

 

ಉಳಿ ಗ್ರಾಮದ ಬಿತ್ತ ನಿವಾಸಿ ವಿಶ್ವನಾಥ ಸಾಲ್ಯಾನ್ ಅವರ ತೋಟದಲ್ಲಿ ೨೫೦ಕ್ಕೂ ಅಽಕ ಅಡಿಕೆ ಮರಗಳು ಧರೆಗುರುಳಿವೆ. ಬಡಗಕಜೆಕಾರು ಗ್ರಾಮದ ರವಿ ಸಾಲ್ಯಾನ್ ಅವರ ೨೦೦ಕ್ಕೂ ಅಧಿಕ ರಬ್ಬರ್ ಮರಗಳು ಧರೆಗುರುಳಿವೆ. ನರಿಕೊಂಬು ಗ್ರಾಮದ ನಾಯಿಲ ನಳಿನಿ ಅವರ ಮನೆಯ ಆವರಣ ಗೋಡೆಗೆ ಸಿಡಿಲು ಬಡಿದು ಹಾನಿಯಾಗಿದೆ.

 

ಕಾವಳ ಮುಡೂರು ಗ್ರಾಮದ ನೆಲ್ಲಿಗುಡ್ಡೆ, ಅಗರ್ತ್ಯಾರು, ಮುಚ್ಚಿ ರೋಡಿ ಪ್ರದೇಶದಲ್ಲಿ ಬೀಸಿದ ಬಿರುಗಾಳಿಗೆ ೬೦ ಎಕ್ರೆ ಪ್ರದೇಶದಲ್ಲಿ ಸಾಕಷ್ಟು ಹಾನಿಯುಂಟು ಮಾಡಿದೆ. ೧೦೦ಕ್ಕೂ ಅಧಿಕ  ಅಡಿಕೆ ತೋಟಗಳಲ್ಲಿ ಫಸಲು ಬಿಡುವ ಅಡಿಕೆ ಮರಗಳು ಗಾಳಿಯ ರಭಸಕ್ಕೆ ನೆಲಕ್ಕುರುಳಿದೆ. ೨೫ಕ್ಕೂ ಅಧಿಕ ವಿದ್ಯುತ್ ಕಂಬಗಳು, ೧೦ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಹಾನಿಯಾದ ಪ್ರದೇಶಗಳಿಗೆ ಕಂದಾಯ, ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ಕಾವಳಮುಡೂರು ಗ್ರಾ.ಪಂ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

More from the blog

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ...

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...