Tuesday, January 27, 2026

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಭಯೋತ್ಪಾದಕ ಪೇಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಬಂಟ್ವಾಳ: ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಭಯೋತ್ಪಾದಕ ಪೇಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ನ್ನು ಉದ್ದೇಶಸಿ ಮಾತನಾಡಿದ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕರ್ನಾಟಕದ ಆತ್ಮ ಪ್ರಜಾಪ್ರಭುತ್ವದ ದೇಗುಲವಾಗಿರುವ ವಿಧಾನಸೌಧದ ಒಳಗೆ ದೇಶದ್ರೋಹದ ಕೆಲಸವಾಗಿರುವ ಪಾಕಿಸ್ತಾನಕ್ಕೆ ಜೈಕಾರ ಕೂಗಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಇದು ಸಿದ್ದರಾಮಯ್ಯ ಅವರ ಎಂಟು ತಿಂಗಳ ಸಾಧನೆಯಾಗಿದೆ ಎಂದು ಆರೋಪ ಮಾಡಿದರು.

ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಇಂದು ಕೆಟ್ಟ ಕೆಲಸಕ್ಕೆ ಇಳಿದಿರುವುದು ದುರಂತ ಎಂದು ಹೇಳಿದರು. ಸುಳ್ಳಿನ ಸರಮಾಲೆಯನ್ನು ಸೃಷ್ಟಿ ಮಾಡಿರುವ ಸಿದ್ದರಾಮಯ್ಯ ಸರಕಾರ, ಪಾಕಿಸ್ತಾನದ ಪರವಾದ ಘೋಷಣೆಯನ್ನು ಇಲ್ಲ ಎಂದು ಹೇಳಲು ಹೊರಟಿದೆ ಎಂದು ಆರೋಪ ಮಾಡಿದರು.

ರಾಜ್ಯದಲ್ಲಿ ಬಾಂಬ್ ಬಿದ್ದರು ಅವರನ್ನು ಬಂಧಿಸುವ ಕೆಲಸ ಮಾಡಲ್ಲ ಯಾಕೆ ಅಂದರೆ ಕಾಂಗ್ರೆಸ್ ಪಕ್ಷದ ಮತದಾರರ ಬುಟ್ಟಿಯೇ ಬಾಂಬ್ ಹಾಕುವರ ಸಂಸ್ಕೃತಿ ಎಂದು ಆರೋಪ ಮಾಡಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ಶಿಕ್ಷೆ ನೀಡದ ಫಲವಾಗಿ ಮುಂದುವರಿದ ಭಾಗವಾಗಿ ಬಾಂಬ್ ಸ್ಫೋಟಕ್ಕೆ ಮುಂದಾಗಿರುವ ಘಟನೆ ನಡೆದಿದೆ. ರಾಜ್ಯ ಸರಕಾರ ಇದೇ ರೀತಿ ಭಯೋತ್ಪಾದಕ ರಿಗೆ ಸಹಕಾರ ನೀಡುತ್ತಾ ಬಂದರೆ ಮುಂದೊಂದು ದಿನ ಬಂಟ್ವಾಳ ದಲ್ಲಿಯೂ ಬಾಂಬ್ ಬ್ಲಾಸ್ಟ್ ಆಗಬಹುದು ಎಂದು ತಿಳಿಸಿದರು.

ಉಗ್ರವಾದಿಗಳ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸಂಪರ್ಕವಿರುವುದಕ್ಕೆ ಇತ್ತೀಚಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅನೇಕ ಘಟನೆಗಳು ಸಾಕ್ಷಿಯಾಗಿವೆ ಎಂದು ಕಿಯೋನಿಕ್ಸ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಆರೋಪ ಮಾಡಿದರು.

ಎರಡು ದಿನಗಳ ಹಿಂದೆ ವಿಧಾನ ಸೌಧದ ಒಳಗೆ ಪಾಕಿಸ್ತಾನಕ್ಕೆ ಜೈಕಾರ ಹಾಕಿದ ಆರೋಪಿಗಳನ್ನು ಬಂಧಿಸುವ ತಾಕತ್ತು ಯಾಕಿಲ್ಲ ಎಂದು ಅವರು ಪ್ರಶ್ನಿಸಿದರು.

ಮುಂದಿನ ದಿನಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಬಾಂಬ್ ಬೀಳುವುದು ಸಿದ್ದರಾಮಯ್ಯ ಅವರ ಎರಡನೇ ಗ್ಯಾರಂಟಿ ….ಜೊತೆಗೆ ಇದೇ ರೀತಿ ಗ್ರಾಮಗ್ರಾಮದಲ್ಲಿ ಪಾಕಿಸ್ತಾನ ಕ್ಕೆ ಜೈಕಾರ ಕೂಗುವುದು ಮೂರನೇ ಗ್ಯಾರಂಟಿ ಘೋಷಣೆ ಮಾಡುತ್ತಾರೆ ಎಂದು ಹೇಳಿದ ಅವರು, ದೇಶದ ಭಯೋತ್ಪಾದಕ ಕೃತ್ಯಗಳಿಗೆ ಸಹಕಾರ ನೀಡಿ ದೇಶದಲ್ಲಿ ಉಗ್ರವಾದಕ್ಕೆ ಸಹಕಾರ ನೀಡುವ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು ‌.

ಮಾಜಿ ರಾಜ್ಯ ವಕ್ತಾರ ವಿಕಾಸ್ ಪುತ್ತೂರು ಮಾತನಾಡಿ, ಡಿಕೆಶಿ ಬ್ರದರ್ಸ್ ಬಾಂಬ್ ಬ್ಲಾಸ್ಟ್ ಮಾಡಲು ಹೊರಟಿದ್ದಾರೆ ಎಂದು ಆರೋಪ ಮಾಡಿದರು.

ದೇವಸ್ಥಾನದ ಹುಂಡಿಯಿಂದ ಕದಿಯುವ ಹಣ ಆರಾಧನ ಎಂಬ ಯೋಜನೆಗೆ ಹೋಗುತ್ತಿದ್ದು,ಈ ಹಣವನ್ನು ಅನ್ಯಕೋಮಿನ ದೇವಾಲಯಗಳಿಗೆ ಬಳಸಬಹುದು ,ಮಸೀದಿಗಳಿಗೆ ಚರ್ಚ್ ಗಳಿಗೆ ಹಿಂದೂ ದೇವಸ್ಥಾನದ ಹಣವನ್ನು ನೀಡಲು ಹೊರಟ ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇವಪ್ಪ ಪೂಜಾರಿ, ಸುಲೋಚನ ಜಿ.ಕೆ.ಭಟ್,ದೇವದಾಸ್ ಶೆಟ್ಟಿ, ಡೊಂಬಯ್ಯ ಅರಳ, ವಜ್ರನಾಥ್ ಕಲ್ಲಡ್ಕ, ಕಮಲಾಕ್ಷಿ ಕೆ.ಪೂಜಾರಿ, ಲಖಿತಾ ಆರ್ ಶೆಟ್ಟಿ, ರಾಮ್ ದಾಸ್ ಬಂಟ್ವಾಳ,ಚೆನ್ನಪ್ಪ ಕೋಟ್ಯಾನ್,ತುಂಗಪ್ಪ ಬಂಗೇರ, ದಿನೇಶ್ ಅಮ್ಟೂರು,ರವೀಶ್ ಶೆಟ್ಟಿ ಕರ್ಕಳ, ಪುರುಷೋತ್ತಮ ಶೆಟ್ಟಿ,ಪುರುಷೋತ್ತಮ ಸಾಲಿಯಾನ್, ಜನಾರ್ದನ ಬೊಂಡಾಲ, ಆನಂದ ಶಂಭೂರು, ಕಿಶೋರ್ ಪಲ್ಲಿಪಾಡಿ, ಮೋನಪ್ಪ ದೇವಸ್ಯ, ಶುಭಕರ ಶೆಟ್ಟಿ, ಚಿದಾನಂದ ರೈ ಕಕ್ಯ, ಸಂತೋಷ್ ರಾಯಿಬೆಟ್ಟು, ಕೇಶವ ದೈಪಲ, ರಮನಾಥ ರಾಯಿ, ಕಾರ್ತಿಕ್ ಬಲ್ಲಾಳ್,ರೋನಾಲ್ಡ್ ಡಿ.ಸೋಜ, ವಸಂತ ಕಕ್ಯಪದವು,ದಿನೇಶ್ ಶೆಟ್ಟಿ ದಂಬೆದಾರ್, ಗಣೇಶ್ ರೈ ಮಾಣಿ, ವಿಜಯ್ ರೈ, ಮೋಹನ್ ಪಿ.ಎಸ್.ಸದಾನಂದ ನಾವೂರ, ಹರೀಶ್ ರೈ ಪೆರಾಜೆ, ಗೋವಿಂದ ಪ್ರಭು, ಹರಿಪ್ರಸಾದ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಪ್ರತಿಭಟನೆಯ ಕೊನೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ಗೆ ಬೆಂಕಿ ನೀಡಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...