Thursday, February 13, 2025

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು.

ನೂತನ ಪದಾಧಿಕಾರಿಗಳಿಗೆ ನೂತನ ಜವಾಬ್ದಾರಿಗಳ ಘೋಷಣಾ ಪತ್ರವನ್ನು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ರಘು ಕೌಟಿಲ್ಯ ನೀಡಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ್ ಇವರಿಗೂ ಜವಾಬ್ದಾರಿಯ ಘೋಷಣಾ ಪತ್ರವನ್ನು ನೀಡಿದರು

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯರವರು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹೊಸ ಶಕೆಯನ್ನು ಆರಂಭ ಮಾಡಿದೆ. ಕಾರ್ಯಕರ್ತರಲ್ಲಿ ಹೊಸ ಉತ್ಸಾಹಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಲು ಕಾರ್ಯಕರ್ತರು ಮುತುವರ್ಜಿ ವಹಿಸಬೇಕು. ನೂತನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಹಾಗೂ ಅರ್ಪಣಾ ಮನೋಭಾವದಿಂದ ನಿರ್ವಹಿಸಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ರಾಜೇಶ್. ಜಿ .ವಿ, ರಾಜ್ಯ, ಓಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಸಕರಾದ ಯಶ್ ಪಾಲ ಸುವರ್ಣ, ರಾಜ್ಯ ಬಿಜೆಪಿ ಉಪಾಧ್ಯಕ್ಷರು ಮಾಜಿ ಸಚಿವರಾದ ಹರತಾಳು ಹಾಲಪ್ಪ, ಮಾಜಿ ಸಚಿವರಾದ ರೇಣುಕಾಚಾರ್ಯ ರಾಜ್ಯ ಉಪಾಧ್ಯಕ್ಷರಾದ ವಿವೇಕಾನಂದ ಡಬ್ಬಿ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಗೋವಿಂದ್ ರಾಜ್ ಓಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಸೋಮಶೇಖರ್ ರವರು ಉಪಸ್ಥಿತರಿದ್ದರು

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...