Friday, July 11, 2025

ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಾಗಾರ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಸದಸ್ಯತ್ವ ಅಭಿಯಾನದ ಕಾರ್ಯಗಾರ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್ ಕಾರ್ಯಾಗಾರವನ್ನು  ಉದ್ಘಾಟಿಸಿದರು. ಕ್ಷೇತ್ರ ಅಧ್ಯಕ್ಷ ದೇವದಾಸ್ ಶೆಟ್ಟಿ  ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸುದರ್ಶನ್  ಮೂಡಬಿದರೆ ಮಾಹಿತಿ ನೀಡಿದರು.ಈ ಬಾರಿ ಅತೀ ಹೆಚ್ಚಿನ ಸದಸ್ಯರನ್ನು ನೋಂದಾಯಿಸುವ ಮೂಲಕ ಪಕ್ಷ ಬಲ ಪಡಿಸುವಂತೆ ಕರೆ ನೀಡಿದರು. ರಾಜ್ಯ ಸಹ ವಕ್ತಾರೆ ಸುಲೋಚನ.ಜಿ.ಕೆ ಭಟ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಸದಸ್ಯತ್ವ ಅಭಿಯಾನದ ಕ್ಷೇತ್ರ ಸಂಚಾಲಕ ದೇವಪ್ಪ ಪೂಜಾರಿ, ಸಹ ಸಂಚಾಲಕ ಅಭಿಷೇಕ್ ರೈ , ಜಿಲ್ಲಾ ಯುವ ಮೋರ್ಚ ಪ್ರ.ಕಾರ್ಯದರ್ಶಿ ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.

More from the blog

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...